ಯಲ್ಲಾಪುರ-ಅoಕೋಲಾ ಗಡಿಭಾಗದ ಕೊಡ್ಲಗದ್ದೆಯಲ್ಲಿ ಭಾನುವಾರ ರಾತ್ರಿ ಎರಡು ವಾಹನಗಳ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಮತ್ತೊಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.
ಬೈಕೊoದು ಯಲ್ಲಾಪುರದಿಂದ ಅಂಕೋಲಾ ಕಡೆ ಹೋಗುತ್ತಿತ್ತು. ಈ ವೇಳೆ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿದೆ. ಜೊತೆಗೆ ಬೈಕಿನ ಮೇಲೆ ಕಾರು ಹತ್ತಿದೆ. ಅಪಘಾತದ ರಭಸಕ್ಕೆ ಬೈಕಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ.
ಬೈಕಿನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದಲ್ಲಿ ಸಾವನಪ್ಪಿದವರ ದೇಹವನ್ನು ಶವಾಗಾರಕ್ಕೆ ಸಾಗಿಸಲಾಗಿದೆ. ಅಪಘಾತದಲ್ಲಿ ಬೈಕ್ ಜಖಂ ಆಗಿದೆ.
ಕೊಡ್ಲಗದ್ದೆಯ ಸುನೀಲ ಪಟಗಾರ ಸಾವನಪ್ಪಿದ ವ್ಯಕ್ತಿ. ವಿಶ್ವನಾಥ ಅಂಬಿಗ ಗಂಭೀರ ಗಾಯಗೊಂಡವರು. ಕೊಡ್ಲಗದ್ದೆ ಕ್ರಾಸಿನ ಬಳಿ ಬೈಕಿನವರು ತಿರುವುಪಡೆದಾಗ ಕಾರು ಉರುಳಿಕೊಂಡು ಬಂದು ಬೈಕಿಗೆ ಗುದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಯಲ್ಲಾಪುರ ಸಿಪಿಐ ರಮೇಶ ಹಾನಾಪುರ ಅವರು ಸ್ಥಳ ಭೇಟಿ ಮಾಡಿದ್ದಾರೆ.
Discussion about this post