ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದರಿoದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದವರು ಅಗಸ್ಟ 19ರವರೆಗೂ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗಿದ್ದರಿಂದ ಚಂಡಮಾರುತ ಬೀಸುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ. ಸಾರ್ವಜನಿಕರು ಸಹ ನದಿ, ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದಲ್ಲಿ ಹಠಾತ್ ಪ್ರವಾಹ ಉಂಟಾಗುವ ಲಕ್ಷಣಗಳಿರುವುದರಿಂದ ಆ ಭಾಗದ ಜನ ಸುರಕ್ಷಿತ ಸ್ಥಳಕ್ಕೆ ತೆರಳುವುದು ಸೂಕ್ತ.
ಮಳೆಯ ಜೊತೆಗೆ ಗಾಳಿ ಕೂಡಾ 60 ಕಿಮೀ ವೇಗದಿಂದ ಬೀಸುವ ಸಾಧ್ಯತೆಯಿದೆ. ಹೀಗಾಗಿ ಅಪಾಯಕಾರಿ ಮರಗಳ ಕೆಳಗೂ ಆಶ್ರಯಪಡೆಯದಿರುವುದು ಒಳಿತು. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಸುರಕ್ಷತಾ ಸ್ಥಳಕ್ಕೆ ಹೋಗಬೇಕು. ತುರ್ತು ಸೇವೆಗೆ 08382-229857 ಅಥವಾ 9483511015 ಸಂಪರ್ಕಿಸಲು ಜಿಲ್ಲಾಡಳಿತ ಕೋರಿದೆ.
