ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಪರಿಣಾಮ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿಯೂ ಮಳೆ ವ್ಯಾಪಕವಾಗಿದ್ದು, ಮಂಗಳವಾರ ಅಣೆಕಟ್ಟಿನ 11 ಗೇಟುಗಳಿಂದ 15 ಸಾವಿರ ಕ್ಯೂಸೆಕ್ ನೀರು ನೀರು ಹೊರಬಿಡಲಾಗಿದೆ.
ಜಲಾಶಯದ ವಿಡಿಯೋ ನೋಡಿ.. ಸುದ್ದಿ ಮುಂದೆ ಓದಿ..
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲಕುಗಳಲ್ಲಿ ಅಗಸ್ಟ 20ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ ಘೋಷಣೆಯಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು, ಜಲಾಶಯದ ನೀರಿನ ಮಟ್ಟವು 1815.50 ಅಡಿ ದಾಟಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 59,891 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದೆ. ಈ ಹಿನ್ನಲೆ ಅಗಸ್ಟ 19ರ ಬೆಳಗ್ಗೆ 10ಗಂಟೆಗೆ ಜಲಾಶಯದ ನೀರು ಹೊರಬಿಡಲಾಗಿದೆ. ಪರಿಣಾಮ ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿ ಪ್ರವಾಹ ಸಾಧ್ಯತೆ ಹೆಚ್ಚಿದೆ. ಹೊನ್ನಾವರ ತಾಲೂಕಿನ ವ್ಯಾಪ್ತಿಯಲ್ಲಿರುವ ತಳಮಟ್ಟದ ಗ್ರಾಮದವರಿಗೆ ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ.
ಈಗಾಗಲೇ ಶರಾವತಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರ ಕುರಿತು ಕಾಳಜಿ ಕೇಂದ್ರ ತೆರೆಯಲಾಗಿದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ತುರ್ತು ಸೇವೆಗೆ 08382-229857 ಮತ್ತು 9483511015 ಸಂಪರ್ಕಿಸುವoತೆ ಜಿಲ್ಲಾಡಳಿತ ಹೇಳಿದೆ.
