• Latest
Religious War Devotees protest against propaganda!

ಧರ್ಮ ಯುದ್ಧ: ಅಪಪ್ರಚಾರದ ವಿರುದ್ಧ ಭಕ್ತರು ಕೆಂಡಾಮoಡಲ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಧರ್ಮ ಯುದ್ಧ: ಅಪಪ್ರಚಾರದ ವಿರುದ್ಧ ಭಕ್ತರು ಕೆಂಡಾಮoಡಲ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Religious War Devotees protest against propaganda!
ADVERTISEMENT

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಅಲ್ಲಿನ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರ ಮಾಡುತ್ತಿರುವುದನ್ನು ಭಕ್ತರು ಖಂಡಿಸಿದ್ದಾರೆ. ಧರ್ಮಸ್ಥಳದ ಅವಹೇಳನ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ವೀರೇಂದ್ರ ಹೆಗ್ಗಡೆ ಅವರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಮಂಗಳವಾರ ಶಿರಸಿಯಲ್ಲಿ ಧರ್ಮಸ್ಥಳದ ಭಕ್ತರು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದರು. ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕಾಗಿ ಹಕ್ಕೊತ್ತಾಯ ಮಾಡಿದರು. `ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ 800 ವರ್ಷಗಳ ಐತಿಹ್ಯ ಹೊಂದಿದೆ. ಪ್ರಪಂಚ ನಾನಾ ಮೂಲೆಗಳಿಂದ ಇಲ್ಲಿ ಭಕ್ತರು ಬರುತ್ತಿದ್ದು, ಮಂಜುನಾಥ ಸ್ವಾಮಿ ಕ್ಷೇತ್ರದ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅವಹೇಳನ ನಡೆಯುತ್ತಿದೆ. ಇದನ್ನು ತಕ್ಷಣ ತಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT

`ಕಳೆದ ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣನವರ, ಮಹೇಶ ಶೆಟ್ಟಿ ತಿಮರೋಡಿ, ಸಮೀರ್ ಎಮ್ ಡಿ, ಜಯಂತ್ ಟಿ ಹಾಗೂ ಅವರ ಸಹಚರರು ಮಂಜುನಾಥ ಸ್ವಾಮಿ ದೇವಾಲಯ ಹಾಗೂ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕತರುವ ಪ್ರಯತ್ನ ಮಾಡುತ್ತಿದ್ದಾರೆ. ಕೀಳು ಮಟ್ಟದ ಭಾಷೆ ಬಳಸಿ ಅವರ ವಿರುದ್ಧ ವಿಡಿಯೋ ಮಾಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದರಿಂದ ಕ್ಷೇತ್ರದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಪ್ರತಿಭಟನಾಕಾರರು ವಿವರಿಸಿದರು.

`ಅನಾಮಿಕ ವ್ಯಕ್ತಿ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿ ತನಿಖೆ ಮಾಡಿದನ್ನು ಎಲ್ಲರೂ ಸ್ವಾಗತಿಸಿದ್ದೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲ ಉಂಟು ಮಾಡಲಾಗುತ್ತಿದೆ. ಈ ತಂಡಕ್ಕೆ ಸಿಗುವ ಹಣಕಾಸಿನ ನೆರವಿನ ಬಗ್ಗೆ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದರು. `ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾದ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದರು.

ಸೊಂದಾ ಜೈನ ಮಠದ ಜಗದ್ಗುರು ಸ್ವಸ್ತಿ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಧರ್ಮಸ್ಥಳ ಭಕ್ತ ವೇದಿಕೆಯ ಅಧ್ಯಕ್ಷ ಉಪೇಂದ್ರ ಪೈ, ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ ದುಭಾಶಿ, ಲಿಂಗಾಯತ ಮುಖಂಡ ಗಣೇಶ ಸಣ್ಣಲಿಂಗಣ್ಣನವರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ನಗರ ಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಸಭೆ ಉಪಾಧ್ಯಕ್ಷ ರಮಾಕಾಂತ ಭಟ್ಟ, ಪ್ರಮುಖರಾದ ರಾಘವೇಂದ್ರ ಶೆಟ್ಟಿ, ಕುಮಾರ ಬೊರ್ಕರ, ಸುಧೀರ ನಾಯರ್, ನವೀನ ಶೆಟ್ಟಿ, ಸದಾನಂದ ಭಟ್ಟ, ರಮೇಶ ನಾಯ್ಕ, ನಂದನ ಸಾಗರ, ಅನಂತಮೂರ್ತಿ ಹೆಗಡೆ ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.

ADVERTISEMENT

Discussion about this post

Previous Post

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ನಾಗರಿಕ ವೇದಿಕೆ ಖಂಡನೆ

Next Post

2025 ಆಗಸ್ಟ್ 20ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋