• Latest
Hundred problems with areca nut crop Delegation goes to Delhi for permanent solution

ಅಡಿಕೆ ಬೆಳೆಗೆ ನೂರು ಸಮಸ್ಯೆ: ಶಾಶ್ವತ ಪರಿಹಾರಕ್ಕಾಗಿ ದೆಹಲಿಗೆ ಹೋದ ನಿಯೋಗ

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Sunday, October 19, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಡಿಕೆ ಬೆಳೆಗೆ ನೂರು ಸಮಸ್ಯೆ: ಶಾಶ್ವತ ಪರಿಹಾರಕ್ಕಾಗಿ ದೆಹಲಿಗೆ ಹೋದ ನಿಯೋಗ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Hundred problems with areca nut crop Delegation goes to Delhi for permanent solution
ADVERTISEMENT

ಅಡಿಕೆ ಬೆಳೆಗಾರರು ನೂರಾರು ಬಗೆಯ ಸಮಸ್ಯೆ ಅನುಭವಿಸುತ್ತಿದ್ದು, ಅಡಿಕೆ ಬೆಳೆಗಾರ ಕ್ಷೇತ್ರದ ಸಂಸದರು ಈ ಸಮಸ್ಯೆಯ ಬಗ್ಗೆ ದೆಹಲಿಯಲ್ಲಿ ಮಾತನಾಡಿದ್ದಾರೆ. ಅಡಿಕೆ ಬೆಳೆಗಾರರ ಸಂಘದ ಪ್ರತಿನಿಧಿಗಳ ನಿಯೋಗರಚಿಸಿದ ಸಂಸದರು ಸಮಸ್ಯೆಗಳ ಬಗ್ಗೆ ವಿವಿಧ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹ ಜಿಲ್ಲೆ ಪ್ರಮುಖ ಸಹಕಾರಿಗಳನ್ನು ದೆಹಲಿಗೆ ಕರೆದೊಯ್ದು ಕೇಂದ್ರ ಸಚಿವರನ್ನು ಭೇಟಿ ಮಾಡಿಸಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಸಂಸದರು ಹಾಗೂ ಅಡಿಕೆ ಬೆಳೆಗಾರರು ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಪರಿಣಾಮವಾಗಿ ಅಡಿಕೆ ರೋಗಕ್ಕೆ ಬಾಧಿಸುತ್ತಿರುವ ಹಳದಿ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ ಎಂದು ಅಡಿಕೆ ಬೆಳೆಗಾರ ಕ್ಷೇತ್ರದ ಸಂಸದರು ಒತ್ತಾಯಿಸಿದ್ದು, ಮಾರಕ ರೋಗಗಳಿಗೆ ಶಾಶ್ವತ ಪರಿಹಾರ ಅಗತ್ಯ ಎಂದು ಹೇಳಿದ್ದಾರೆ.

ADVERTISEMENT

`ಅಡಿಕೆ ಅಕ್ರಮ ಆಮದು ನಿಯಂತ್ರಣಕ್ಕೆ ಕಠಿಣ ಕ್ರಮ ಜರುಗಿಸಬೇಕು. ಅಡಿಕೆಯ ಅಕ್ರಮ ಆಮದನ್ನು ತಡೆಯಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸಬೇಕು’ ಎಂದು ಈ ನಿಯೋಗದವರು ಕೇಂದ್ರದ ಮೇಲೆ ಒತ್ತಡ ಹಾಕಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಅಡಿಕೆಯಲ್ಲಿನ ತೇವಾಂಶ ಮಟ್ಟವನ್ನು ಶೇ 7ರಿಂದ ಶೇ11-12ಕ್ಕೆ ಹೆಚ್ಚಿಸುವಂತೆ ಎಫ್‌ಎಸ್‌ಎಸ್‌ಎಐಗೆ ಸಹ ಮನವಿ ಸಲ್ಲಿಸಿದ್ದಾರೆ. ಭಾರತೀಯ ಮಾನದಂಡಗಳ ಬ್ಯೂರೋ (ಬಿಐಎಸ್) ನಿಗದಿಪಡಿಸಿರುವ ಅಡಿಕೆ ಗ್ರೇಡಿಂಗ್ ಮಾನದಂಡಗಳನ್ನು ಪುನರ್ ಪರಿಶೀಲಿಸಿ, ಸ್ಥಳೀಯ ಭೌಗೋಳಿಕ ವ್ಯತ್ಯಾಸಗಳನ್ನು ಗಣನೆಗೆ ತೆಗೆದುಕೊಳ್ಳುವಂತೆಯೂ ನಿಯೋಗದವರು ಒತ್ತಾಯಿಸಿದ್ದಾರೆ.

ಜೊತೆಗೆ `ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲಗಳ ಮೇಲಿನ ಬಡ್ಡಿದರ ಕಡಿಮೆ ಮಾಡಬೇಕು. ಇದಕ್ಕೆ ಹೊಸ ಮಾನದಂಡಗಳನ್ನು ರೂಪಿಸಬೇಕು. ಇದರಿಂದ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ. ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆ ವಿಮಾ ಸೌಲಭ್ಯಗಳನ್ನು ಬಲಪಡಿಸುವಂತೆಯೂ ನಿಯೋಗವು ಮನವಿ ಮಾಡಿದೆ. ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ಮಾಡಿದ ಬಯೋಡಿಗ್ರೇಡಬಲ್ ಪ್ಲೇಟ್‌ಗಳನ್ನು ಕ್ಯಾನ್ಸರ್ ಕಾರಕ ಎಂದು ಘೋಷಿಸಿರುವುದರಿಂದ ಉಂಟಾದ ರಫ್ತು ಸಮಸ್ಯೆಗಳನ್ನು ಬಗೆಹರಿಸಬೇಕು. ಕಾರ್ಬನ್ ಫೈಬರ್ ದೋಟಿ ಮತ್ತು ಇತರೆ ಕೃಷಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

Discussion about this post

Previous Post

2025ರ ಅಗಸ್ಟ 22ರ ದಿನ ಭವಿಷ್ಯ

Next Post

ಆನಮೋಡ: ಈ ರಸ್ತೆಯ ಆಳ-ಅಗಲ ಅರಿಯುವೇ ಅಸಾಧ್ಯ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋