ಯಲ್ಲಾಪುರದಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ 7 ಜನ ಗಾಯಗೊಂಡಿದ್ದಾರೆ. ಕೆಎಸ್ಆರ್ಟಿಸಿ ಬಸ್ಸು, ಟ್ಯಾಂಕರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ನಡೆದಿದೆ.
ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಜೋಡುಕೆರೆ ಬಳಿಯ ಪೆಟ್ರೊಲ್ ಪಂಪ್ ಎದುರು ಈ ಅಪಘಾತ ನಡೆದಿದೆ. ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಮೊಲ ಅಪಘಾತ ನಡೆದಿದೆ. ನಂತರ ಟ್ಯಾಂಕರ್ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಮೂರೂ ವಾಹನಗಳಿಗೂ ಹಾನಿಯಾಗಿದೆ.
ಈ ಅಪಘಾತದಲ್ಲಿ ಬಸ್ಸಿನ ಒಳಗಿದ್ದ ಏಳು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತವಾದ ವಾಹನಗಳು ರಸ್ತೆ ಮೇಲೆ ನಿಂತಿದ್ದರಿAದ ಸಂಚಾರಕ್ಕೆ ತೊಂದರೆಯಾಗಿದ್ದು, ಅದನ್ನು ಪೊಲೀಸರು ತೆರವು ಮಾಡಿದರು.
