ಸಿದ್ದಾಪುರ ಹಾಗೂ ಬನವಾಸಿಯನ್ನು ಸಾಗರಕ್ಕೆ ಸೇರಿಸಿ ಹೊಸ ಜಿಲ್ಲೆ ಮಾಡುವ ಹೋರಾಟ ಶುರುವಾಗಿದೆ. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದ್ದು, `ಆ ಹೋರಾಟ ಯಶಸ್ವಿ ಆಗುವುದಿಲ್ಲ’ ಎಂದು ಕದಂಬ ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಭವಿಷ್ಯ ನುಡಿದಿದ್ದಾರೆ.
`ಕಳೆದ 30 ವರ್ಷಗಳಿಂದ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಒಳಗೊಂಡು ಶಿರಸಿ ಜಿಲ್ಲೆಯಾಗಬೇಕು ಎಂಬ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರವು ಡಿ 31ರ ಒಳಗಡೆ ತಾಲೂಕು ರಚನೆ ಹಾಗೂ ಜಿಲ್ಲೆ ರಚನೆ ಪಟ್ಟಿ ನೀಡಿ ಎಂದು ಕೇಳಿರುವುದನ್ನು ನಾವು ಕೇಳಿ ಸಂತೋಷಗೊAಡಿದ್ದೆವು. ಶಿರಸಿ ಜಿಲ್ಲೆಯಾಗುತ್ತದೆ ಎಂಬ ವಿಶ್ವಾವಿತ್ತು. ಆದರೆ, ಈ ಹೋರಾಟ ಕೆಡಿಸಬೇಕು ಎಂದು ಕೆಲವರು ಸಿದ್ದಾಪುರ ಹಾಗೂ ಬನವಾಸಿ ಸೇರಿಸಿಕೊಂಡು ಸಾಗರ ಜಿಲ್ಲೆಯನ್ನಾಗಿ ಮಾಡಲು ಹೊರಟಿದ್ದಾರೆ’ ಎಂದು ಅನಂತಮೂರ್ತಿ ಹೆಗಡೆ ಕಿಡಿಕಾರಿದ್ದಾರೆ.
`ಸಾಗರ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಸಭೆಯೂ ನಡೆಯುತ್ತಿದೆ. ಶಿರಸಿ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಕೂಗು ತೀವ್ರವಾಗಿರುವಾಗ ಈ ರೀತಿ ಮಾಡುವುದು ಸರಿಯಲ್ಲ. ನಮ್ಮ ಪಕ್ಷಾತೀಯ ಹೋರಾಟ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತವಾಗಬೇಕು’ ಎಂದವರು ಕರೆ ನೀಡಿದ್ದಾರೆ. `ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿಯಾಗಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗಲು ನಮ್ಮ ಜತೆ ಕೈಜೋಡಿಸಬೇಕು ಎಂದು ವಿನಂತಿಸಿದಾಗ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಸಂಸದ ವಿಶ್ವೇಶ್ವರ ಹೆಗಡ ಕಾಗೇರಿ ಅವನ್ನು ಭೇಟಿಯಾಗಿ ವಿನಂತಿಸಿದಾಗ ಅವರೂ ಹೋರಾಟಕ್ಕೆ ಬೆಂಬಲ ನೀಡಿದ್ದರು’ ಎಂದು ನಾಯಕರ ಭರವಸೆಯನ್ನು ಅನಂತಮೂರ್ತಿ ಹೆಗಡೆ ಸ್ಮರಿಸಿದ್ದಾರೆ.
Discussion about this post