• Latest
MPs meet to resolve burning issues Urgent action urged

ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ಸಭೆ: ತುರ್ತು ಕ್ರಮಕ್ಕೆ ತಾಕೀತು

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Thursday, October 23, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ಸಭೆ: ತುರ್ತು ಕ್ರಮಕ್ಕೆ ತಾಕೀತು

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
MPs meet to resolve burning issues Urgent action urged
ADVERTISEMENT

ಅಡಿಕೆಗೆ ಬಾದಿಸುತ್ತಿರುವ ಎಲೆಚುಕ್ಕಿ ರೋಗ, ಶರಾವತಿ ಪಂಪ್ ಸ್ಟೋರೆಜ್ ಯೋಜನೆ, ಹೊಂಡಗಳಿoದ ಕೂಡಿದ ರಸ್ತೆ, ಬಿಎಸ್ ಎನ್ ಎಲ್ ನೆಟ್ ವರ್ಕ ಸಮಸ್ಯೆ ಹಾಗೂ ಸೂರ್ಯ ಘರ್ ಯೋಜನೆಯ ವಿಷಯವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಸಭೆ ನಡೆಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಶುಕ್ರವಾರ ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅವರು ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. `ಜಿಲ್ಲೆಯ ಎಲ್ಲಾ ಕಡೆ ರಸ್ತೆಗಳ ದುರವಸ್ಥೆಯಿಂದ ಕೂಡಿದೆ. ತಕ್ಷಣ ಹೊಂಡಮಯ ರಸ್ತೆಗಳನ್ನು ಸರಿಪಡಿಸಬೇಕು. ಸಂಚಾರ ನಿಷೇಧ ಕ್ರಮಗಳಿಂದ ಅಪಘಾತಗಳು ಕಡಿಮೆಯಾಗುವ ಬದಲು ಹೆಚ್ಚಳವಾಗುತ್ತಿgದೆ. ಅಪಘಾತ ತಡೆಗೆ ಕ್ರಮ ಜರುಗಿಸಬೇಕು’ ಎಂದು ತಾಕೀತು ಮಾಡಿದರು. `ಮೀನುಗಾರಿಕೆಯ ಇಲಾಖೆ ಮೂಲಕ ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುವುದರ ಮೂಲಕ ಮೀನುಗಾರರಿಗೆ ಅನುಕೂಲ ಮಾಡಿಕೊಡಬೇಕು. ಕೇಂದ್ರ ಸರ್ಕಾರದಿಂದ ಜಿಲ್ಲೆಯ 8 ಬಂದರುಗಳನ್ನು ಮೇಲ್ದರ್ಜೆಗೇರಿಸಲು 50 ಕೋಟಿ ರೂ ಗಳ ಯೋಜನೆ ಇದ್ದು, ಕೂಡಲೇ ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಲ್ಲಿ ಕೇಂದ್ರದಲ್ಲಿ ಶೀಘ್ರದಲ್ಲಿ ಅನುಮತಿ ನೀಡಲಾಗುತ್ತದೆ’ ಎಂದು ಹೇಳಿದರು.

ADVERTISEMENT

`ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಜಿಲ್ಲೆಯ ಧಾರಣಾ ಶಕ್ತಿ ಅಧ್ಯಯನ ಮಾಡಬೇಕು. ಧಾರಣಾ ಶಕ್ತಿ ಅಧ್ಯಯನ ಇಲ್ಲದೇ ಹೊಸ ಯೋಜನೆ ಒಪ್ಪಿಕೊಳ್ಳಲು ಅಸಾಧ್ಯ’ ಎಂದು ತಿಳಿಸಿದರು. `ಜನತೆ ಹಲವು ಯೋಜನೆಗಳಿಗೆ ತ್ಯಾಗ ಮಾಡಿದರೂ ಕೂಡಾ ಉದ್ಯೋಗ, ಪರಿಹಾರ ಸೇರಿದಂತೆ ಯಾವುದೇ ನಿರೀಕ್ಷಿತ ಪ್ರಯೋಜನವಾಗಿಲ್ಲ. ಬದಲಾಗಿ ಜಿಲ್ಲೆಯ ಪರಿಸರ ಹಾನಿಯಾಗುತ್ತಿದೆ. ಕಾರವಾರ ರೈಲ್ವೆ ನಿಲ್ದಾಣದಲ್ಲಿ ವಾಟರ್ ಸ್ಟೇಷನ್ ಮಾಡುವ ಕುರಿತು ಚರ್ಚಿಸಲಾಗಿದ್ದು, ಇದರಿಂದ ಕಾರವಾರ ನಿಲ್ದಾಣ ಉತ್ತಮವಾದ ರೀತಿಯಲ್ಲಿ ಅಭಿವೃದ್ಧಿಯಾಗುವ ಜೊತೆಗೆ ಜಿಲ್ಲೆಯಲ್ಲಿ ರೈಲ್ವೆಯ ಹಲವು ಯೋಜನೆಗಳು ಇನ್ನಷ್ಟು ಪ್ರಗತಿಯಾಗಲಿವೆ’ ಎಂದರು.

`ಎಲೆ ಚುಕ್ಕಿ ರೋಗ ತಡೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿಶೇಷ ಬೆಳೆಗಳು ಮತ್ತು ಬೆಳೆಗಾರರು ಬಗ್ಗೆ ಮಾಹಿತಿ ಅಧಿಕಾರಿಗಳಿಗೆ ಇರಬೇಖು. ಸಾವಯವ ಕೃಷಿಗೆ ಉತ್ತೇಜನ ನೀಡಬೇಕು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಇಲ್ಲಿನ ಸ್ಥಳಿಯ ಮತ್ತು ಸ್ವದೇಶೀ ಉತ್ಪನ್ನಗಳ ಬಳಕೆ ಹೆಚ್ಚಿಸಬೇಕು’ ಎಂದು ಸೂಚಿಸಿದರು. `ಕೃಷಿ, ತೋಟಗಾರಿಕೆ ಮತ್ತು ಪಶುಪಾಲನಾ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು’ ಎಂದು ಸೂಚಿಸಿದರು. `ಹೆಸ್ಕಾಂ ವತಿಯಿಂದ ಸೂರ್ಯ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೂ ಇದನ್ನು ಅಳವಡಿಸಬೇಕು. ಈ ಯೋಜನೆಯು ಆದಾಯ ಮೂಲ ಎಂಬುದನ್ನು ಮನವರಿಕೆ ಮಾಡಿಕೊಡಬೇಕು’ ಎಂದರು. `ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಿಂದ ಅನರ್ಹರಾಗಿರುವ ಸುಮಾರು 10000 ಮಂದಿಯನ್ನು ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳಿ’ ಎಂದರು.

`ಜಿಲ್ಲೆಯಲ್ಲಿನ ಪ್ರತಿಯೊಬ್ಬ ಸಾರ್ವಜನಿಕರಿಗೂ ಆರೋಗ್ಯ ಇಲಾಖೆಯ ಮೂಲಕ ಆಯಷ್ಮಾನ್ ಆರೋಗ್ಯ ಸೇವೆಗಳು ಮತ್ತು ಹಿರಿಯ ನಾಗರೀಕರಿಗೆ ವಯೋ ವಂದನಾ ಯೋಜನೆಯ ಪ್ರಯೋಜನವನ್ನು ತಲುಪಿಸಿ’ ಎಂದು ಸೂಚಿಸಿದರು. `ಎಲ್ಲಾ ಸಾರ್ವಜನಿಕರಿಗೂ ಆಯಷ್ಮಾನ್ ಆರೋಗ್ಯ ಸೇವೆಗಳು ಮತ್ತು ಹಿರಿಯ ನಾಗರೀಕರಿಗೆ ವಯೋ ವಂದನಾ ಯೋಜನೆಯ ಪ್ರಯೋಜನಗಳು ದೊರೆಯಬೇಕು. ಇದನ್ನು ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗದ ಬಗ್ಗೆ ತಾಂತ್ರಿಕ ಕಾರಣಗಳು ನೆಪವಾಗಬಾರದು’ ಎಂದರು. ಜಿಲ್ಲೆಯಲ್ಲಿ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ಮಾಣ ಮತ್ತು ಸಂಪರ್ಕ ಕಾರ್ಯದ ಕುರಿತಂತೆ ಅರಣ್ಯ ಇಲಾಖೆಯ ಮೂಲಕ ಬಿ.ಎಸ್.ಎನ್.ಎಲ್ ಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಅವರು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದರು. `ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ದೂರುಗಳು ಬರುತ್ತಿದ್ದು, ಈ ಬಗ್ಗೆ ಪರಿಶೀಲಿಸಿ. ಗುತ್ತಿಗೆದಾರರಿಗೆ ಕಾಮಗಾರಿ ಮುಕ್ತಾಯ ಸಮಯ ನಿಗಧಿಗೊಳಿಸಿ ಅವರ ವಿರುದ್ದ ಬಿಗು ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮುಂದಿನ ಹಂತದಲ್ಲಿ ಇನ್ನೂ 800 ಹಳ್ಳಿಗಳಿಗೆ ಜಲ ಜೀವನ್ ಯೋಜನೆಯ ಸಂಪರ್ಕ ನೀಡಲು ಬಾಕಿಯಿದ್ದು ಇದನ್ನೂ ಶೀಘ್ರದಲ್ಲಿ ಮುಕ್ತಾಯಗೊಳಿಸಿ’ ಎಂದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಇದ್ದರು.

ADVERTISEMENT

Discussion about this post

Previous Post

ಸಿಸಿ ಕ್ಯಾಮರಾದಲ್ಲಿ ಸಿಕ್ಕ ಸಾಕ್ಷಿ: ಮಾಸ್ಕ್ ಮ್ಯಾನ್’ನ ಮುಖವಾಡ ಬಯಲು!

Next Post

ಡಿಜೆ ಸದ್ದಿಗೆ ನಲುಗಿದ ಶಿರಸಿಕಾ ಮಹಾರಾಜ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋