ಅಂಕೋಲಾದ ಹಿಲ್ಲೂರು – ಮಾರ್ಕಲ್ ರಸ್ತೆ ಹದಗೆಟ್ಟ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿದ್ದು, ಕಾನೂನು ಸೇವಾ ಪ್ರಾಧಿಕಾರದಿಂದ ರಸ್ತೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ಬಂದಿದೆ.
ಅoಕೋಲಾ ತಾಲೂಕಿನ ಹಿಲ್ಲೂರು-ಮರಾಕಲ್ ರಸ್ತೆ ಸಂಪೂರ್ಣ ಹೊಂಡಗಳಿAದ ಕೂಡಿದ ಬಗ್ಗೆ ಮಾರಕಲ್ ಭಾಗದ ಬೀರಣ್ಣ ನಾಯಕ ಆಕ್ರೋಶವ್ಯಕ್ತಪಡಿಸಿದ್ದರು. ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಅವರು ಕಿಡಿಕಾರಿದ್ದರು.
`ಈ ರಸ್ತೆ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡಿಗ್ರಸ್ ಅವರು ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. `ಸಾರ್ವಜನಿಕ ತೆರಿಗೆ ಹಣದಲ್ಲಿ ಅಧಿಕಾರಿಗಳಿಗೆ ಸರ್ಕಾರ ಸೌಲಭ್ಯ ಕಲ್ಪಿಸಿದೆ. ಆದರೆ, ಸಾರ್ವಜನಿಕ ಹಿತ ಕಾಪಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಜನ ತೆರಿಗೆ ಪಾವತಿಸಿದರೂ ಸರ್ಕಾರದಿಂದ ಅಗತ್ಯ ರಸ್ತೆ ನಿರ್ಮಾಣ ಸಾಧ್ಯವಾಗಿಲ್ಲ’ ಎಂದು ಪ್ರಯಾಣಿಕರು ಆಕ್ರೋಶವ್ಯಕ್ತಪಡಿಸಿದ್ದರು.
`ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಆದರೆ, ರಸ್ತೆ ಹೊಂಡ ಬಿದ್ದಿರುವ ಬಗ್ಗೆ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ರಸ್ತೆ ಹೊಂಡ ಸರಿಪಡಿಸುವ ಬಗ್ಗೆಯೂ ಕ್ರಮ ಜರುಗಿಸಿಲ್ಲ’ ಎಂದು ಅವರು ದೂರಿದ್ದರು. `ಕೂಡಲೇ ಈ ರಸ್ತೆ ದುರಸ್ಥಿ ಕಾರ್ಯ ಕೈಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಬೇಕು’ ಎಂದು ಅವರು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಯಾಗಿ ಇದೀಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧಿಕಾರಿಗಳಿಗೆ ರಸ್ತೆ ರಿಪೇರಿ ಬಗ್ಗೆ ಸೂಚಿಸಿದೆ. ಹೀಗಾಗಿ ರಸ್ತೆಯನ್ನು ತಾತ್ಕಾಲಿಕ ದುರಸ್ಥಿ ಮಾಡಿದ ಅಧಿಕಾರಿಗಳು ಶಾಶ್ವತ ದುರಸ್ಥಿ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನಹರಿಸಿ ಅನುದಾನ ನೀಡಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.
Discussion about this post