• Latest
ಗುಂಗು ಹಿಡಿಸಿದ ಗಂಗಿ ಗಂಗಿ ಹಾಡು!

ಗುಂಗು ಹಿಡಿಸಿದ ಗಂಗಿ ಗಂಗಿ ಹಾಡು!

1 month ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Friday, October 17, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಗುಂಗು ಹಿಡಿಸಿದ ಗಂಗಿ ಗಂಗಿ ಹಾಡು!

uknews9.comby uknews9.com
in ಸಿನಿಮಾ
ADVERTISEMENT
ಸ್ಯಾಂಡಲ್ ವುಡ್ಡಿನ ಯಶಸ್ವಿ ಕಾಂಬಿನೇಷನ್ ನಿರ್ದೇಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬ್ರ‍್ಯಾಟ್ ಚಿತ್ರದ `ಗಂಗಿ ಗಂಗಿ’ ಎಂಬ ಮಾಸ್ ಹಾಡು ಅದ್ದೂರಿಯಾಗಿ ಬೆಂಗಳೂರು ನಗರದ ಮಂತ್ರಿ ಮಾಲಿನ ಆವರಣದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ.
ಈಗಾಗಲೇ ಈ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಗೊಂಡು ಭರ್ಜರಿಯಾಗಿ ಸದ್ದು ಮಾಡುತ್ತಿದೆ. ಈ “ಬ್ರ‍್ಯಾಟ್” ಚಿತ್ರವನ್ನು ಮಂಜುನಾಥ್ ಕಂದಕೂರ್ ಅದ್ದೂರಿಯಾಗಿ ನಿರ್ಮಿಸುತ್ತಿದ್ದು , ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ ಮಾಡಲು ತಂಡ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ತಾವೇ ರಚಿಸಿ ಹಾಡಿದ್ದಾರೆ. ಇವರೊಂದಿಗೆ ಗಾಯಕಿ ಇಂದು ನಾಗರಾಜ್ ಕೂಡ ಸಾಥ್ ನೀಡಿದ್ದಾರೆ. ಯಶಸ್ವಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕಂಪೋಸಿoಗ್ ನಲ್ಲಿ ಬಂದಿರುವ ಈ ಹಾಡಿಗೆ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮುಂಬೈ ಬೆಡಗಿ ಅನೈರಾ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಈ ಹಾಡು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡ ನಂತರ ಚಿತ್ರತಂಡ ಚಿತ್ರದ ಕುರಿತು ಮಾಹಿತಿಯನ್ನು ಹಂಚಿಕೊoಡರು.
ಈ ಚಿತ್ರದ ನಿರ್ದೇಶಕ ಶಶಾಂಕ್ ಮಾತನಾಡುತ್ತಾ ಈ ಚಿತ್ರದ ಶೀರ್ಷಿಕೆ ಬಗ್ಗೆ ಕ್ಲಾರಿಟಿ ಕೊಡ್ತೀನಿ, “ಬ್ರ‍್ಯಾಟ್” ಎಂದರೆ ತರ್ಲೆ ಹುಡುಗ , ಒಂದು ರೀತಿ ದಾರಿ ತಪ್ಪಿದ ಮಗ ಎಂದು ಹೇಳಬಹುದು. ಇದೊಂದು ಅಪ್ಪ-ಮಗನ ಕಥೆಯಾಗಿದ್ದು , ಭರ್ಜರಿ ಆಕ್ಷನ್ , ಥ್ರಿಲ್ಲರ್ ಜೊತೆಗೆ ಮನೋರಂಜನೆಯ ಅಂಶವು ತುಂಬಿಕೊAಡಿದೆ. ಇಡೀ ಚಿತ್ರ ಆರಂಭದಿoದ ಕೊನೆಯವರೆಗೂ ಎಲ್ಲಿಯೂ ಬೇಸರವಾಗದೆ ಸಂಪೂರ್ಣ ಎಂಟರ್ಟೈನ್ಮೆAಟ್ ಸಿಗಲಿದೆ. ಒಂದೊoದೇ ಹಾಡನ್ನು ವಿಭಿನ್ನ ರೀತಿಯಲ್ಲಿ ಬಿಡುಗಡೆ ಮಾಡುತ್ತಿದ್ದು ,ಈಗಾಗಲೇ ಸಿದ್ ಶ್ರೀರಾಮ್ ಹಾಡಿರುವ “ನಾನೇ ನೀನಂತೆ” ಎಂಬ ಹಾಡು ಎಲ್ಲೆಡೆ ಬಾರಿ ವೈರಲ್ ಆಗಿದ್ದು , ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ಈಗ ಬಿಡುಗಡೆಯಾಗಿರುವ “ಗಂಗಿ ಗಂಗಿ” ಎಂಬ ಮಾಸ್ ಹಾಡನ್ನು ಗ್ರಾಮೀಣ ಪ್ರತಿಭೆ , ಜನಪದ ಗಾಯಕ ಬಾಳು ಬೆಳಗುಂದಿ ಹಾಗೂ ನಾಯಕಿ ಇಂದು ನಾಗರಾಜ್ ಅದ್ಭುತವಾಗಿ ಹಾಡಿದ್ದಾರೆ. ನಮ್ಮ ಚಿತ್ರದಲ್ಲಿ ಬಹಳಷ್ಟು ಹೈಲೈಟ್ ಗಳಿದ್ದು , ಅದರಲ್ಲಿ ಅರ್ಜುನ್ ಜನ್ಯ ಅವರ ಸಂಗೀತ ಕೂಡ ಅಷ್ಟೇ ಸೊಗಸಾಗಿ ಪ್ರತಿ ಹಾಡು ಮೂಡಿಬಂದಿದೆ. ಈಗಾಗಲೇ ನನ್ನ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಬಂದಿದ್ದ “ಕೌಸಲ್ಯ ಸುಪ್ರಜಾ ರಾಮ” ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು. ಈಗ ಮತ್ತೊಮ್ಮೆ ನಿಮ್ಮ ಮುಂದೆ “ಬ್ರ‍್ಯಾಟ್” ಚಿತ್ರವನ್ನು ನವೆಂಬರ್ 14 ರಂದು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ , ಆನಂದ್ ಆಡಿಯೋ ಮೂಲಕ “ಬ್ರ‍್ಯಾಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ನೀವೆಲ್ಲರೂ ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎಂದರು.
ನಟ ಡಾರ್ಲಿಂಗ್ ಕೃಷ್ಣ ಮಾತನಾಡುತ್ತಾ ಈ ಚಿತ್ರದ ಕಥೆ ಬಹಳ ವಿಭಿನ್ನವಾಗಿದೆ. ಅದರಲ್ಲೂ ವಿಶೇಷವಾಗಿ ನನ್ನ ಲುಕ್ ಡಿಫ್ರೆಂಟ್ ಆಗಿದೆ. ನಾನು ಡ್ಯಾನ್ಸ್ ಮಾಡಿ ಸುಮಾರು ಮೂರು ನಾಲ್ಕು ವರ್ಷಗಳೇ ಕಳೆದಿತ್ತು , ಈ ಹಾಡಿಗೆ ಸ್ಟೆಪ್ಸ್ ಹಾಕಲು ಕಾರಣ ನಮ್ಮ ನಿರ್ದೇಶಕ ಶಶಾಂಕ್. ಈ ಹಾಡು ಇಷ್ಟು ಚೆನ್ನಾಗಿ ಬಂದಿದೆ ಎಂದರೆ ಅದರ ಎಲ್ಲಾ ಕ್ರೆಡಿಟ್ ನಮ್ಮ ನೃತ್ಯ ನಿರ್ದೇಶಕ ಹಾಗೂ ಡೈರೆಕ್ಟರ್ ಗೆ ಸಲ್ಲಬೇಕು. ಹಾಗೆಯೇ ಈ “ಗಂಗಿ ಗಂಗಿ” ಹಾಡು ಇಷ್ಟು ಜೋಶ್ ನಲ್ಲಿ ಬರಲು ಬಾಳು ಬೆಳಗುಂದಿ ಅವರ ಸಾಹಿತ್ಯ, ಗಾಯನ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಪ್ರಮುಖ ಕಾರಣ ಕಾರಣವಾಗಿದೆ. ಹಾಗೆಯೇ ಈ ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಮೇಲಿನ ಪ್ರೀತಿಯೇ ಈ ಚಿತ್ರವು ಇಷ್ಟು ಸೊಗಸಾಗಿ ಬಂದಿದೆ. ಅದೇ ರೀತಿ ಇಂದು ಬಿಡುಗಡೆಯಾಗಿರುವ ಈ ಮಾಸ್ ಹಾಡು ಅದ್ದೂರಿಯಾಗಿ ಮೂಡಿ ಬಂದಿದೆ. ಸದ್ಯದಲ್ಲೇ ಚಿತ್ರ ಬರಲಿದೆ ನೀವೆಲ್ಲರೂ ನೋಡಿ ಎಂದರು. ಇನ್ನು ಈ ಚಿತ್ರದ ನಟಿ ಮನಿಶಾ ಕಂದಕೂರ್ ಮಾತನಾಡುತ್ತಾ ನಾನು ಕೂಡ ಕನ್ನಡದವಳು , ಇದು ನನ್ನ ಮೊದಲನೆಯ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ. ಸಿನಿಮಾ ಬಹಳ ಸೊಗಸಾಗಿ ಮೂಡಿ ಬಂದಿದೆ. ಪ್ರತಿಯೊಂದು ಹಾಡು ವಿಭಿನ್ನವಾಗಿ ಮೂಡಿ ಬಂದಿದ್ದು , ಈಗ ಬಿಡುಗಡೆಯಾಗಿರುವ “ಗಂಗಿ ಗಂಗಿ” ಹಾಡು ಬಹಳ ಚೆನ್ನಾಗಿದೆ ಎಂದು ಹೇಳಿದರು.
ಈ ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಮಾತನಾಡುತ್ತಾ ನಮ್ಮ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಂತರ ನಾನು ನಿರ್ಮಾಣ ಮಾಡುತ್ತಿರುವ ಎರಡನೇ ಚಿತ್ರ “ಬ್ರ‍್ಯಾಟ್”. ನನಗೆ ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು , ಹಾಗಾಗಿ ಈ ಸಿನಿಮಾ ಮಾಡಲು ನಿರ್ಧರಿಸಿದೆ. ಅಂದುಕೊAಡAತೆ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಹಾಗೆಯೇ ನಟ ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರವು ಮತ್ತೊಂದು ಸೂಪರ್ ಹಿಟ್ ಆಗಲಿದೆ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಸೊಗಸಾಗಿದೆ , ಎಲ್ಲರೂ ಚಿತ್ರವನ್ನು ಚಿತ್ರಮಂದಿರಕ್ಕೆ ಬಂದು ನೋಡಿ ಎಂದರು.
ಗ್ರಾಮೀಣ ಪ್ರತಿಭೆ ಬಾಳು ಬೆಳಗುಂದಿ ಮಾತನಾಡುತ್ತಾ ಕುರಿಗಾಹಿಯಾಗಿದ್ದ ನಾನು ಬಹಳಷ್ಟು ಜನಪದ ಗೀತೆಗಳನ್ನು ಬರೆದು ಹಾಡುತ್ತಿದ್ದೆ. ಒಂದು ಉತ್ತಮ ವೇದಿಕೆಯಾಗಿ “ಸರಿಗಮಪ” ದಲ್ಲಿ ಅವಕಾಶ ಸಿಕ್ಕಿತು. ಆ ಕಾರ್ಯಕ್ರಮದ ಜಡ್ಜ್ ಆಗಿದ್ದ ಅರ್ಜುನ್ ಜನ್ಯ ಸರ್ ಅವರು ನನ್ನ ಹಾಡನ್ನು ಗಮನಿಸಿ ನನ್ನ ಸಂಗೀತದ ಸಿನಿಮಾದಲ್ಲಿ ನಿನಗೊಂದು ಅವಕಾಶ ಕೊಡುತ್ತೇನೆ ಎಂದಿದ್ದರು , ಅದರಂತೆ ಈ ಸಿನಿಮಾದಲ್ಲಿ ನನ್ನಿಂದ ಗೀತ ರಚನೆಯು ಬರೆಸಿ ಹಾಡಲು ಅವಕಾಶವನ್ನು ನೀಡಿದ್ದಾರೆ. ಅವರಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ. ಹಾಗೆಯೇ ಈ ಚಿತ್ರದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು. ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಚಿತ್ರದಲ್ಲಿ ನಟಿಸಿರುವ ಡ್ಯಾಗನ್ ಮಂಜು ಸೇರಿದಂತೆ ಕಿದ್ವಾಯ್ ಸಂಸ್ಥೆಯ ವೈದ್ಯ ರಾಮಚಂದ್ರ ಹಾಗೂ ಬದರಿನಾಥ್ ಸೇರಿದಂತೆ ಬಹಳಷ್ಟು ಗಣ್ಯರು ಅತಿಥಿಗಳಾಗಿ ಆಗಮಿಸಿದ್ದರು. ಎಲ್ಲಾ ಅಂದುಕೊAಡoತೆ ಚಿತ್ರ ಮೂಡಿ ಬಂದಿದ್ದು , ಅದ್ದೂರಿ ಪ್ರಚಾರದ ಮೂಲಕ ನವಂಬರ್ 14ರಂದು ಚಿತ್ರ ತೆರೆಯ ಮೇಲೆ ಬಿಡುಗಡೆಯಾಗಲಿದೆ.
ADVERTISEMENT
ADVERTISEMENT
Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

Discussion about this post

Previous Post

ಮೊಬೈಲ್ ಮಾಯೆ: ಟೋಪಿವಾಲನಿಗೆ ಮಕ್ಮಲ್ ಟೋಪಿ ಹಾಕಿದ ಸೈಬರ್ ಕ್ರಿಮಿ!

Next Post

ಸಂತ್ರಸ್ತರಿಗೆ ಸಾಂತ್ವಾನ ಹೇಳಿದ ದನಗರಗೌಳಿ ಯುವ ಸೇನೆ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋