`ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣ ನಡೆದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ಪ್ರಕರಣ ನಡೆಯದಂತೆ ಮುನ್ನಚ್ಚರಿಕೆವಹಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿದ ಅವರು `ಎಲ್ಲಾ ಬ್ಯಾಂಕುಗಳು ಈಗಾಗಲೇ ಅಳವಡಿಸಿರುವ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಸಲಕರಣೆಗಳ ಬಗ್ಗೆ ಆಂತರಿಕ ಪರಿಶೀಲನೆ ನಡೆಸಬೇಕು. ಲೋಪಗಳನ್ನು ಸರಿಪಡಿಸಿಕೊಳ್ಳಬೇಕು. ಬ್ಯಾಂಕ್ ಗಳಲ್ಲಿ ಉತ್ತಮ ಗುಣಮಟ್ಟದ ಅತ್ಯಾಧುನಿಕ ಎಫ್ ಆರ್ ಎಸ್ ( ಫೇಸ್ ರೆಕಗ್ನೇಷನ್ ಸಿಸ್ಟಂ) ಕ್ಯಾಮೆರಾಗಳನ್ನು ಅಳವಡಿಸಬೇಕು’ ಎಂದು ಸೂಚಿಸಿದರು. `ಬ್ಯಾಂಕುಗಳ ಹೊರಭಾಗದಲ್ಲಿ ಆಟೋಮೇಟಿಕ್ ನಂಬರ್ ಪ್ಲೇಟ್ ರೆಕಗ್ನೇಷನ್ ಕ್ಯಾಮೆರಾಗಳನ್ನು ಅಳವಡಿಸಬೇಕು. ಎಲ್ಲಾ ಕ್ಯಾಮರಾಗಳು ಸೂಕ್ತ ಜಾಗದಲ್ಲಿ ಸುಸ್ಥಿತಿಯಲ್ಲಿರಬೇಕು’ ಎಂದು ಸೂಚಿಸಿದರು.
`ಬ್ಯಾಂಕ್‌ಗಳಲ್ಲಿನ ಅಲಾರಂ ವ್ಯವಸ್ಥೆಯನ್ನು ತುರ್ತು ಸಮಯದಲ್ಲಿ ಸಮೀಪದ ಪೊಲೀಸ್ ಠಾಣೆ ಹಾಗೂ ಅಥವಾ ಪೊಲೀಸ್ ಕಂಟ್ರೋಲ್ ರೂಂ’ಗೆ ಎಚ್ಚರಿಕೆ ರವಾನಿಸುವ ರೀತಿಯಲ್ಲಿರಿಸಬೇಕು. ಎಲ್ಲಾ ಬ್ಯಾಂಕ್ ಗಳಿಗೆ ಸಶಸ್ತçಧಾರಿ ಕಾವಲುಗಾರರನ್ನು ನೇಮಕ ಮಾಡಿ, ಕಾವಲುಗಾರರಿಗೆ ಶಸ್ತಾçಸ್ತಗಳನ್ನು ಹೊಂದಲು ಪೊಲೀಸ್ ಇಲಾಖೆಯಿಂದ ಸೂಕ್ತ ಅನುಮತಿಯನ್ನು ಪಡೆಯಬೇಕು. ದೂರ ಪ್ರದೇಶದಲ್ಲಿರುವ ಮತ್ತು ಕಾವಲುಗಾರರಿಲ್ಲದ ಎಟಿಎಂ’ನ್ನು ರಾತ್ರಿಯ ವೇಳೆ ಮುಚ್ಚುವುದು ಉತ್ತಮ’ ಎಂದು ಹೇಳಿದರು. `ಎಟಿಎಂಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದಲ್ಲಿ ಇ-ಬೀಟ್ ವ್ಯವಸ್ಥೆಯ ಮೂಲಕ ನಿರಂತರವಾಗಿ ಪರಿಶೀಲನೆ ನಡೆಸಲಾತ್ತದೆ’ ಎಂದು ತಿಳಿಸಿದರು.
`ಬ್ಯಾಂಕ್‌ಗಳ ಹಿಂಭಾಗದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿಯ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಿ’ ಎಂದರು, ಬ್ಯಾಂಕ್‌ಗಳಲ್ಲಿನ ಸುರಕ್ಷತೆ ಬಗ್ಗೆ ಆಗಾಗ್ಗೆ ಅಣುಕು ಪರೀಕ್ಷೆಗಳನ್ನು ಮಾಡಿ ಹೆಚ್ಚು ಸುರಕ್ಷಿತವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಿ’ ಎಂದು ಸೂಚಿಸಿದರು. ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಇದ್ದರು.
Discussion about this post