ಕೆನರಾ ವೆಲ್‌ಫೆರ್ ಟ್ರಸ್ಟಿನ ಅಡಿ ನಡೆಯುವ ಅಂಕೋಲಾದ ಪಿ ಎಂ ಹೈಸ್ಕೂಲಿನಲ್ಲಿ ಶಿಕ್ಷಕರಾಗಿರುವ ಜಿ ಆರ್ ತಾಂಡೇಲ್ ಅವರಿಗೆ ಬೆಂಗಳೂರಿನ ಪ್ರೆಸ್ ಕ್ಲಬ್ ನೀಡುವ `ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಿ ಆರ್ ತಾಂಡೇಲ್ ಅವರು ಪಿ ಎಂ ಹೈಸ್ಕೂಲಿನ ಎನ್‌ಸಿಸಿ ಅಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಭಾಷಾ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿರುವ ಅವರು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಯಾಗಿದ್ದಾರೆ. ಅವರ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆ 24ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಸವ ರಮಾನಂದ ಮಹಾಸ್ವಾಮೀಜಿ ಅವರು ಜಿ ಆರ್ ತಾಂಡೇಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. `ಸರಳ ಬೋಧನೆಯ ಜೊತೆ ವಿದ್ಯಾರ್ಥಿಗಳ ಮನಗೆದ್ದ ಜಿ ಆರ್ ತಾಂಡೇಲ ಅವರಿಗೆ ಪ್ರಶಸ್ತಿ ಸಿಕ್ಕಿದ್ದು ಖುಷಿಯ ಸಂಗತಿ’ ಎಂದು ಅವರ ಆಪ್ತರಾದ ಗಣೇಶ ಬೀಷ್ಠಣ್ಣನವರ್ ಸಂತಸ ಹಂಚಿಕೊoಡರು.
Discussion about this post