ಕಾರವಾರ:
ನಗರದ ಆರ್ಟಿಒ ಕಚೇರಿಯ ಬಳಿ ಗುರುವಾರ ಸಂಜೆ ಬೈಕ್ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಯಲ್ಲಾಪುರ ತಾಲೂಕಿನ ಇಡಗುಂದಿಯ ಚಿರಂಜೀವ್ ಬೃಹ್ಮಾನಂದ ಕುಂಜಿ (15) ಮೃತ ಯುವಕ.
ತನ್ನ ತಾಯಿಯೊಂದಿಗೆ ಮಾಜಾಳಿಯ ಮನೆಯೊಂದರಲ್ಲಿ ಬಾಡಿಗೆ ಇದ್ದ ಇವರು ಗುರುವಾರ ಸಂಜೆ ಕಾರವಾರಕ್ಕೆ ಬರುವಾಗ ಅಪಘಾತ ನಡೆದಿದೆ. ಇಲ್ಲಿನ ಆರ್ಟಿಒ ಕಚೇರಿಯ ಬಳಿ ಹಿಂದಿನಿಂದ ಬಂದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದ್ದು ಚಿರಂಜೀವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸ್ಥಳೀಯ ಪ್ರಯಾಣಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಂಬುಲೆನ್ಸ್ ಮೂಲಕ ಮೃತದೇಹ ಹಾಗೂ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದಲ್ಲಿ ಮೃತನ ತಾಯಿ ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಗೋವಾದ ಖಾಸಗಿ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
