ಭಟ್ಕಳ:
ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ತುಂಬಿದ ಲಾರಿ ಬಾವಿಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಕುಂದಾಪುರದಿಂದ ಅಕ್ಕಿ ತುಂಬಿಕೊಂಡು ಶಿಗ್ಗಾವಿಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಖಾಲಿ ಜಾಗದಲ್ಲಿದ್ದ ಬಾವಿಗೆ ಬಿದ್ದಿದೆ. ಚಾಲಕ ಸಿದ್ದರಾಜು ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
