ದಾಂಡೇಲಿ :
ಶಾಸಕ ಆರ್.ವಿ.ದೇಶಪಾಂಡೆಯವರ ವಿಶೇಷ ಪ್ರಯತ್ನದಡಿ ಮಂಜೂರಾಗಿ ರೂ.1,02,00,000/- ಮೊತ್ತದಲ್ಲಿ ನಗರದ ಕೆ.ಸಿ.ವೃತ್ತದಿಂದ ಜೆ.ಎನ್ ರಸ್ತೆಯ ಸುಭಾಷನಗರ ಕ್ರಾಸ್ ವರೆಗೆ ನಗರದ ಸೌಂದರ್ಯಕರಣಕ್ಕಾಗಿ ಧಾರವಾಡದ ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪ ವಿಭಾಗದ ವತಿಯಿಂದ ಒಟ್ಟು 74 ಅಲಂಕಾರಿಕ ಬೀದಿ ದೀಪಗಳಿಗೆ ಜೆ.ಎನ್.ರಸ್ತೆಯಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಅಷ್ಪಾಕ್ ಶೇಖ್, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ರಿಯಾಜ್ ಸೈಯದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ತಹಶೀಲ್ದಾರ್ ಶೈಲೇಶ್ ಪರಮಾನಂದ, ನಗರ ಸಭೆಯ ಪೌರಾಯುಕ್ತ ವಿವೇಕ ಬನ್ನೆ, ನಗರಸಭೆಯ ನಿಕಟಪೂರ್ವ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಧಾರವಾಡದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ನಗರದ ಸಾರ್ವಜನಿಕರು ಉಪಸ್ಥಿತರಿದ್ದರು.
