ಕಾರವಾರ:
ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಡಿ.30 ರಿಂದ ಕುಮಟಾ-ಶಿರಸಿ, ರಾಷ್ಟ್ರೀಯ ಹೆದ್ದಾರಿ-766ಇ ರಸ್ತೆಯನ್ನು ಬಸ್ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಆದೇಶಿಸಿದ್ದಾರೆ.
ಕುಮಟಾ-ಶಿರಸಿ, ರಾಷ್ಟ್ರೀಯ ಹೆದ್ದಾರಿ-766ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು, ಪೊಲೀಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವರದಿ ಆಧಾರದ ಮೇಲೆ ಬಸ್ ಸಂಚಾರಕ್ಕೆ ಮುಕ್ತ ಮಾಡಲಾಗಿದೆ. ಸಂಚಾರದ ಸಂದರ್ಭದಲ್ಲಿ ಬಸ್ ಹೊರತುಪಡಿಸಿ ಬೇರೆ ಭಾರಿ ವಾಹನಗಳು ಸಂಚರಿಸುವಂತಿಲ್ಲ. ಕಾಮಗಾರಿ ಪ್ರಗತಿಯಲ್ಲಿರುವ ಪ್ರದೇಶದಲ್ಲಿ ವೇಗದ ಮೀತಿ 20 ಕಿಲೋಮೀಟರ್ಗೆ ಸೀಮಿತಗೊಳಸಲಾಗಿದೆ. ಪೊಲೀಸ್ ಇಲಾಖೆಯಿಂದ ಅವಶ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಸಂಚಾರ ದಟ್ಟಣೆ ಆಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ವೇಗದ ಮಿತಿ ಫಲಕ, ರಸ್ತೆ ತಿರುವು ಪ್ರದೇಶದಲ್ಲಿ ಅಗತ್ಯ ಸೂಚನಾ ಫಲಕಗಳು ಹಾಗೂ ಸರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಆದೆಶಿಸಲಾಗಿದೆ.
