ಅಂಕೋಲಾ:
ಅಂಕೋಲಾ ತಾಲೂಕಿನಲ್ಲಿ ಮತ್ತೊರ್ವ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಅಂಕೋಲಾದ ನಾರಾಯಣ ಪಾಂಡು ಹುಲಸ್ವಾರ ನೇಣು ಬಿಗಿದುಕೊಂಡ ವ್ಯಕ್ತಿ. ಈತನು ಕುಡಿತಕ್ಕೊಳಗಾಗಿದ್ದ ಎಂದು ತಿಳಿದು ಬಂದಿದೆ. ವಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಹಸಲ್ಗದ್ದೆ ಸಮೀಪದ ಬೆಟ್ಟದಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕೈದು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಸ್ತಳೀಯರಿಗೆ ದುರ್ವಾಸನೆ ಬಂದ ಬಳಿಕಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಅಂಕೋಲಾ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ
ತಾಲೂಕಿನ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ. ಈ ಹಿಂದೆ ಪಟ್ಟಣದ ಹಸ್ಲಗದ್ದೆ ಪ್ರದೇಶದ ಯುವಕನೋರ್ವ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದ.
