ಮುಂಡಗೋಡ :
ತಾಲೂಕಿನ ತಟ್ಟಿಹಳ್ಳಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಆತನ ಮಗನೇ ಭೀಕರ ಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿ ಶಿವಾನಂದ (47) ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ತಂದೆ ಮೇಲೆ ಹಲ್ಲೆ ನಡೆಸಿದ ಮಗ ಶಿವರಾಜ ಪರಾರಿಯಾಗಿದ್ದಾನೆ.
ತಂದೆಗೆ ಮಗನೇ ಕತ್ತಿಯಿಂದ ಹಿಂದಿನಿಂದ ಬಂದು ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿವಾನಂದನನ್ನು ಹುಬ್ಬಳ್ಳಿಯ ಕಿಮ್ಸ್ ಗೆ ಕರೆದುಕೊಂಡು ಹೋಗಲಾಗಿದೆ.
