ದಾಂಡೇಲಿ:
ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರರಾದ ಅಗ್ನಿಶಾಮಕದಳದ ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಳಿಯಾಳ ತಾಲೂಕಿನ ಗಡಿಭಾಗದ ಅಜಗಾಂವ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ನಲ್ಲಿ ಸವಾರಿಸುತ್ತಿದ್ದ ಸುಧಾಕರ್ ಗೌಡ ಹಾಗೂ ಮುಳಿಸುರತ್ ಶೆಟ್ಟಿ ಎಂಬವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರಿಗೂ ಕಾಲುಗಳಿಗೆ ಗಂಭೀರ ಘಟನೆಯ ಬಳಿಕ ಗಾಯಾಳುಗಳನ್ನು ತಕ್ಷಣವೇ ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹಳಿಯಾಳ ಪೊಲೀಸರು, ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
