ಶಿರಸಿ:
ಜಿಲ್ಲೆಯ ಶಿರಸಿ ತಾಲೂಕಿನ ಯಲ್ಲಾಪುರ ರಸ್ತೆಯ ಚವತ್ತಿ–ಉಮ್ಮಚ್ಚಗಿ ಮಧ್ಯದ ಗೊರ್ಸಗದ್ದೆ ಬಳಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಬಸ್ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ನೆರವಾದರು.
ಗಾಯಗೊಂಡ ಪ್ರಯಾಣಿಕರೆಲ್ಲರೂ ಮೈಸೂರಿನವರು ಎನ್ನಲಾಗಿದ್ದು, ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
