ದಾಂಡೇಲಿ :
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ದಾಂಡೇಲಿಯ ಸಾಹಿತ್ಯ ಭವನದಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ನೆರವೇರಿಸಿ, ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷ ಮುರ್ತುಜಾ ಮುಸೇನ ಆನೆಹೊಸೂರ, ದಾಂಡೇಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಕೀರ್ತಿ ಗಾಂವಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ನಗರ ಸಭೆಯ ಮಾಜಿ ಸದಸ್ಯರಾದ ಅನಿಲ್ ದಂಡಗಲ, ರವಿ ಸುತಾರ, ಅನಿಲ್ ನಾಯ್ಕರ, ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಅಜನಾಳ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ .ಆರ್. ನಾಯಕ, ಕಸಾಪ ದಾಂಡೇಲಿ ತಾಲೂಕು ಘಟಕದ ಕಾರ್ಯದರ್ಶಿ ಗುರುಶಾಂತ ಜಡೆಹಿರೇಮಠ, ಸದಸ್ಯರಾದ ಕಲ್ಪನಾ ಪಾಟೀಲ, ವೆಂಕಮ್ಮ ಗಾಂವಕರ, ಸುರೇಶ ಪಾಲನಕರ , ಎಸ್ ಎಸ್ .ಕುರ್ಡೇಕರ, ಬಾಬಣ್ಣ ಶ್ರೀವತ್ಸ , ರುದ್ರಪ್ಪ ಮರುಗೋಡ , ಜಲಜಾ ವಾಸರೆ, ಗೂಳೂರ, ಮುಂತಾದವರು ಉಪಸ್ಥಿತರಿದ್ದರು.
