ದಾಂಡೇಲಿ:
ನಗರದ ವೆಸ್ಟ್ ಕೊಸ್ಟ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಷಾಲಿಟಿ ಆರೋಗ್ಯ ಕೇಂದ್ರ ಧಾರವಾಡದ ಸಹಯೋಗದಲ್ಲಿ ಫೆ. 8 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಚಿಕ್ಕ ಮಕ್ಕಳ (12 ವರ್ಷದೊಳಗಿನ) ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ರಂಗನಾಥ ಅಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಹೇಳಿದರು.
ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಖ್ಯಾತ ಮಕ್ಕಳ ತಜ್ಞ ಡಾ.ರಾಜನ್ ದೇಶಪಾಂಡೆ ನೇತೃತ್ವದಲ್ಲಿ ನಡೆಯಲಿರುವ ಈ ಶಿಬಿರದಲ್ಲಿ 20 ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 8ಕ್ಕೆ ರಂಗನಾಥ ಸಭಾಭವನದ ಆವರಣದಲ್ಲಿ ತೆರೆಯಲಾಗಿರುವ ಕೌಂಟರ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ದಾಂಡೇಲಿ ಸುತ್ತ ಮುತ್ತಲಿನ ಹಳ್ಳಿಗಳಿಂದ ತಪಾಸಣೆ ಶಿಬಿರದಲ್ಲಿ ಪಾಲ್ಗೊಳ್ಳುವರಿಗೆ ಕಾಗದ ಕಾರ್ಖಾನೆಯಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದೆ .ಹಾಗೂ ಬೆಳಿಗ್ಗೆ ಚಹಾ ಹಾಗೂ ತಿಂಡಿಯ ವ್ಯವಸ್ಥೆ ಇರುತ್ತದೆ. ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಲಾಭವನ್ನು ಪಡೆದುಕೊಳ್ಳಬೇಕೆಂದರು.ಇ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಜೆ.ಆರ್. ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಜ್ಞಾನದೀಪಗಾಂವ್ಕರ್ ಉಪಸ್ಥಿತರಿದ್ದರು.
