ದಾಂಡೇಲಿ :
ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಇವರ ಆಶ್ರಯದಡಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕದ ಸಹಕಾರದಲ್ಲಿ ದಾಂಡೇಲಿ ನಗರದ ಹಳೆ ನಗರಸಭೆ ಮೈದಾನದಲ್ಲಿ ಫೆಬ್ರವರಿ 7ರಂದು ಶನಿವಾರ ರಾತ್ರಿ 7:30 ಗಂಟೆಯಿಂದ ಹಿರಿಯ ನಾಟಕಕಾರ ದುಂಡಪ್ಪ ಗೂಳೂರು ವಿರಚಿತ ಶ್ರೀ ನಟರಾಜ ನಾಟ್ಯ ಸಂಘ ಅರ್ಪಿಸುವ “ರೌಡಿ ರಣರಂಗದಲ್ಲಿ ಸತ್ಯವಂತನ ಗೆಲುವು” ಎಂಬ ಸುಂದರ ಸಾಮಾಜಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಾಟಕದ ನಿರ್ದೇಶಕ ಹಾಗೂ ಹಿರಿಯ ಸಾಹಿತಿ ಮುರ್ತುಜಾಹುಸೇನ್ ಆನೆಹೊಸೂರ ಅವರು ಹೇಳಿದರು.
ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಾಟಕ ಪ್ರದರ್ಶನದ ಕುರಿತಂತೆ ಮಾಹಿತಿಯನ್ನು ನೀಡಿದರು. ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ಅಧ್ಯಕ್ಷತೆಯಲ್ಲಿ ನಡೆಯುವ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶೈಲೇಶ ಪಮಾನಂದ, ಡಿವೈಎಸ್ಪಿ ಶಿವಾನಂದ ಮದರಕಂಡಿ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಹಣಕಾಸು ಮತ್ತು ಲೆಕ್ಕ ವಿಭಾಗದ ಹಿರಿಯ ಉಪಾಧ್ಯಕ್ಷ ಅಶೋಕ ಶರ್ಮಾ, ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ವೇಲು ವೆಂಕಟೇಶ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಜೆ.ಆರ್, ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪ ಪ್ರಧಾನ ವ್ಯವಸ್ಥಾಪಕ ವಿಜಯ ಮಹಾಂತೇಶ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮತ್ತು ಕಸಾಪ ತಾಲೂಕು ಅಧ್ಯಕ್ಷ ನಾರಾಯಣ ನಾಯ್ಕ ಭಾಗವಹಿಸಲಿದ್ದಾರೆ.
ದಾಂಡೇಲಿಯ ಹಿರಿಯ ನಾಟಕಕಾರರಾದ ದುಂಡಪ್ಪ ಗೂಳೂರು ಅವರು ರಚಿಸಿದ ಈ ನಾಟಕದಲ್ಲಿ ಸ್ಥಳೀಯ ಶ್ರೀ ನಟರಾಜ ನಾಟ್ಯ ಸಂಘದ ಕಲಾವಿದರು ಅಭಿನಯಿಸಲಿದ್ದಾರೆ. ಸ್ಥಳೀಯ ಕಲಾವಿದರನ್ನು ಹಾಗೂ ಅವರ ಕಲಾ ಸೇವೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ನಾಟಕ ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡುವಂತೆ ಮುರ್ತುಜಾಹುಸೇನ್ ಆನೆಹೊಸೂರ ಅವರು ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ನಟರಾಜ ನಾಟ್ಯ ಸಂಘದ ಅಧ್ಯಕ್ಷ ಹನುಮಂತ ಕಾರಗಿ, ಪ್ರಮುಖರಾದ ಶ್ರೀಮಂತ ಮದರಿ ಉಪಸ್ಥಿತರಿದ್ದರು.
