ಅಂಕೋಲಾ:
ಅಂಕೋಲಾದಿಂದ ಹಾರವಾಡದತ್ತ ಹೊರಟಿದ್ದ ಸರ್ಕಾರಿ ಬಸ್ ಸ್ಟೇರಿಂಗ್ ತುಂಡಾಗಿ ಗದ್ದೆಗೆ ಇಳದಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಿಗ್ಗ 8.30ಕ್ಕೆ ಹಾರವಾಡದ ಕಡೆಗೆ ಬಸ್ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ವೇಳೆ ಪ್ರಯಾಣಿಕರು ಭಯಭೀತರಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಆದರೆ ಈ ಘಟನೆ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯರ ಹೇಳಿಕೆಯಂತೆ, ಬಸ್ಸಿನ ತಾಂತ್ರಿಕ ದೋಷಗಳು ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಮಕ್ಕಳು ಹಾಗೂ ಪೋಷಕರು, ವಿದ್ಯಾರ್ಥಿಗಳ ಸಂಚಾರಕ್ಕೆ ಬಳಸುವ ಬಸ್ಸುಗಳ ವ್ಯವಸ್ಥೆ ಹಾಗೂ ಸುರಕ್ಷತೆ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು ಇನ್ನಟದರೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
