ಕಾರವಾರ:
ನಗರದ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಧ್ಯಾಹ್ನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಪೋಕ್ಸೋ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಬಾಲಕಿಯು ಕಳೆದ ಕೆಲವು ದಿನಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾ ರಂಪಾಟ ಮಾಡುತ್ತಿದ್ದಳು. ಮಾನಸಿಕವಾಗಿ ಕುಗ್ಗಿದ್ದ ವಿದ್ಯಾರ್ಥಿನಿಗೆ ಈಚೆಗೆ ಧಾರವಾಡದ ನಿಮಾನ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಳೆದ ಒಂದು ವಾರದಿಂದ ಶಾಲೆಗೆ ಹೋಗದ ಈಕೆಯು ಶನಿವಾರ ಮಧ್ಯಾಹ್ನ ಬಾಲಮಂದಿರ ಕೇಂದ್ರದ ಕೊನೆಯ ಮಹಡಿಗೆ ತೆರಳಿ ನೇಣು ಬಿಗಿದುಕೊಂಡಿದ್ದಾಳೆ. ತಕ್ಷಣ ಅದನ್ನು ಗಮನಿಸಿದ ಉಳಿದ ವಿದ್ಯಾರ್ಥಿನಿಯರು ಸಿಬ್ಬಂದಿಗೆ ತಿಳಿಸಿದ್ದು ಕೂಡಲೆ ಆಕೆಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯ ಐಸಿಯು ಘಟಕದಲ್ಲಿ ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
