ದಾಂಡೇಲಿ:
ದಾಂಡೇಲಿ ಅರಣ್ಯ ಪ್ರದೇಶದಲ್ಲಿ ಅಪರೂಪದ ದೃಶ್ಯವೊಂದು ಕಂಡುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಅಂಬಿಕಾ ನಗರ ಪವರ್ ಹೌಸ್ ದಾರಿಯ ರಸ್ತೆ ಪಕ್ಕದ ಕಟ್ಟೆಯ ಮೇಲೆ ಚಿರತೆ ಹಾಗೂ ಅದರ ಮರಿ ಕೆಲ ಹೊತ್ತು ಶಾಂತವಾಗಿ ಕೂತು ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಪ್ರಯಾಣಿಕರ ಗಮನ ಸೆಳೆದಿದೆ.
ಪ್ರಯಾಣಿಕರು ತಮ್ಮ ಮೊಬೈಲ್ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಚಿತ್ರಗಳು ವೇಗವಾಗಿ ವೈರಲ್ ಆಗಿವೆ. ರಸ್ತೆ ಪಕ್ಕದಲ್ಲೇ ಚಿರತೆ ಮತ್ತು ಮರಿ ಕಾಣಿಸಿಕೊಂಡಿರುವುದು ಅಪರೂಪ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಾಂಡೇಲಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಸಂಚಾರ ಸಾಮಾನ್ಯವಾಗಿದ್ದು, ಇಂತಹ ಸಂದರ್ಭಗಳಲ್ಲಿ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
