ದಾಂಡೇಲಿ :
ಇಸ್ಕಾನ್ ಸಂಸ್ಥೆಯ ಆಶ್ರಯದಡಿ ನಡೆದ ಜಿಲ್ಲಾ ಮಟ್ಟದ ಮೌಲ್ಯ ಶಿಕ್ಷಣ ಸ್ಪರ್ಧೆಯಲ್ಲಿ ದಾಂಡೇಲಿಯ ಸೈಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ವಂಶಿಕಾ ಚೇತನ್ ಶರ್ಮಾ ಇವಳು ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ವಂಶಿಕಾ ಚೇತನ್ ಶರ್ಮಾ ಇವಳು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಚೇತನ್ ಶರ್ಮಾ ಹಾಗೂ ರಾಜಶ್ರೀ ದಂಪತಿಗಳ ಸುಪುತ್ರಿಯಾಗಿದ್ದಾಳೆ. ಈಕೆಯ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕ್ಲಾರೇಟ್ ಹಾಗೂ ಶಿಕ್ಷಕ ವೃಂದದವರು ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
