ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಆಗಮಿಸಿ ಮಂಜಗುಣಿಯಲ್ಲಿ ನವೀನವಾಗಿ ನಿರ್ಮಾಣಗೊಂಡ ಗಂಗಾವಳಿ ಸೇತುವೆಯನ್ನು ಲೋಕಾರ್ಪಣೆ ಮಾಡಿದರು.
ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಮಂಜಗುಣಿ ಸೇತುವೆ ಉದ್ಘಾಟನೆಯೊಂದಿಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಈ ಸೇತುವೆಯಿಂದ ಅಂಕೋಲಾ ಹಾಗೂ ಸುತ್ತಮುತ್ತಲ ಗ್ರಾಮಗಳ ಸಂಪರ್ಕ ಸುಧಾರಿಸಿ, ಪ್ರಯಾಣ ಸಮಯ ಕಡಿಮೆಯಾಗುವ ಜೊತೆಗೆ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರಕಲಿದೆ.
ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
