ಕಾರವಾರ:
ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಟ್ಟೇ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಗಟ್ಟಿ ಧ್ವನಿಯಲ್ಲಿ ಘೋಷಣೆ ಮಾಡಿದರು.
ಇಲ್ಲಿನ ಕ್ರಿಮ್ಸ್ ಆವರಣದಲ್ಲಿ ನಡೆದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಕ್ರಮದಲ್ಲಿ ಮಾತನಾಡಿದರು.
ಈಗಾಗಲೇ ಶಾಸಕ ಸತೀಸ ಸೈಲ್, ಹಾಗೂ ಇತರರು ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಬೇಡಿಕೆ ಇಟ್ಟಿದ್ದರು. ಅದನ್ನು ಮುಂದಿನ ಆಯವ್ಯಯದಲ್ಲಿ ಘೋಷಣೆ ಮಾಡೇ ಮಾಡುತ್ತೇವೆ. ಅದರಂತೆ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ ಎಂದರು.
