ಉತ್ತರ ಕನ್ನಡ:
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಗುಡುಗು–ಮಿಂಚು ಸಹಿತ ಭಾರೀ ಮಳೆಯಾಗಿದೆ.
ಯಲ್ಲಾಪುರ ಹಾಗೂ ಶಿರಸಿ ತಾಲೂಕುಗಳಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಜೋರಾಗಿ ಮಳೆ ಸುರಿದಿದ್ದು, ರಸ್ತೆಗಳು ಮತ್ತು ಹೆದ್ದಾರಿಗಳ ಮೇಲೆ ಮಳೆ ನೀರು ತುಂಬಿ ಹರಿದ ದೃಶ್ಯಗಳು ಕಂಡುಬಂದಿವೆ.
ಅಕಾಲಿಕ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಜಿಲ್ಲಾದ್ಯಂತ ದಟ್ಟ ಮೋಡಗಳು ಆವರಿಸಿಕೊಂಡಿರುವ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ಯಾವುದೇ ಸಮಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
