ಶಿರಸಿ:
ಸುಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಕುಟುಂಬ ಸಮೇತ ಸೋಮವಾರ ಶ್ರೀ ಮಾರಿಕಾಂಬಾ ದೇವಿಯ ಗದ್ದುಗೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸುನೀಲ್ ಹೆಗಡೆ ದಂಪತಿಯು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಜಿಲ್ಲೆ, ರಾಜ್ಯ ಹಾಗೂ ದೇಶದ ಸಮಸ್ತ ಜನತೆಗೆ ಸುಖ ಸಮೃದ್ಧಿ ಲಭಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು. ಈ ವೇಳೆ ಶ್ರೀ ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿಗಳು ಮತ್ತು ದೇವಾಲಯದ ಸಿಬ್ಬಂದಿಯು ಸುನೀಲ್ ಹೆಗಡೆ ದಂಪತಿಯವರನ್ನು ಸನ್ಮಾನಿಸಿದರು.
