ಶಿರಸಿ:
ಕುಡಿದ ಮತ್ತಿನಲ್ಲಿ ಯುವಕನೋರ್ವ ನಾಡಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರವೀಶ್ ಮಾದೇವ ನಾಯ್ಕ (22) ಎಂದು ಗುರುತಿಸಲಾಗಿದೆ. ಇತನು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು.
ಸ್ಥಳೀಯರ ಮಾಹಿತಿಯ ಪ್ರಕಾರ ರವೀಶ್ ಮಾದೇವ ನಾಯ್ಕ ಮದ್ಯ ವ್ಯಸನಿಯಾಗಿದ್ದು, ಪ್ರೇಮ ವೈಫಲ್ಯದಿಂದ ಮನನೊಂದು ಇದ್ದನು ಎನ್ನಲಾಗಿದೆ. ಮಂಗಳವಾರ ರಾತ್ರಿ ಮನೆಯ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿದ ಆತ, ತನ್ನ ಬಳಿ ಇದ್ದ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
