ಮುಂಡಗೋಡ :
ಸಾಲಬಾಧೆ ತಾಳಲಾರದೇ ರೈತನೊಬ್ಬ ಗದ್ದೆಗೆ ಸಿಂಪಡಿಸಲು ತಂದಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಗಳ್ಳಿ ಗ್ರಾ. ಪಂಚಾಯತ್ ವ್ಯಾಪ್ತಿಯ ಕಾವಲಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನರಸಿಂಗ್ ಪೀರಪ್ಪ ಕಿವುಡನವರ (51) ಆತ್ಮಹತ್ಯೆ ಮಾಡಿಕೊಂಡ ರೈತ. ಈತನು 3 ಎಕರೆ 23 ಗುಂಟೆ ಜಮೀನಿನಲ್ಲಿ ಭತ್ತ ಹಾಗೂ ಮೆಕ್ಕೆಜೋಳ ಬೆಳೆದಿದ್ದನು.ಇದಕ್ಕಾಗಿ ಚಿಗಳ್ಳಿ ಗ್ರಾಮದ ಸೇವಾ ಸಹಕಾರಿ ಸಂಘದಲ್ಲಿ 110,000 ರೂ. ಸಾಲ ಮಾಡಿದ್ದನು. ಆದರೆ ಕಳೆದ ವರ್ಷ ವಿಪರೀತ ಮಳೆಯಿಂದ ಬೆಳೆ ಹಾನಿಯಾಗಿದ್ದರಿಂದ ಸಹಕಾರಿ ಸಂಘದಲ್ಲಿ ಮಾಡಿದ ಸಾಲ ತೀರಿಸುವುದು ಎಂದು ಮನಸ್ಸಿಗೆ ಹಚ್ಚಿಕೊಂಡು ಮಾ. 8ರಂದು ರಾತ್ರಿ ಬೆಳೆಗೆ ಸಿಂಪಡಿಸಲು ತಂದಿದ್ದ ಕ್ರಿಮಿನಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೇ ತಾಲೂಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 9 ರಂದು ಮೃತಪಟ್ಟಿರುವುದಾಗಿ ಮೃತನ ಹೆಂಡತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
