ಜೋಯಿಡಾ:
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಗ್ರಾಮ ಲೆಕ್ಕಾಧಿಕಾರಿ (Village Accountant) ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ರಾಮನಗರದ ಗ್ರಾಮ ಆಡಳಿತಾಧಿಕಾರಿ ಸಂತೋಷ್ ಮ್ಯಾಗೇರಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ದಾಖಲೆ ಬದಲಾವಣೆ ಮಾಡಿಕೊಡುವುದಾಗಿ ಹೇಳಿ ರಾಮನಗರದ ಗುರ್ಜರ್ ಎಂಬುವವರಿಂದ ₹18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ₹13 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಂತೋಷ್ ಮ್ಯಾಗೇರಿ ಅವರನ್ನು ಬಲೆಗೆ ಬೀಳಿಸಿದ್ದಾರೆ.
ಲೋಕಾಯುಕ್ತ ಸಿ.ಪಿ.ಐ ವಿನಾಯಕ್ ಬಿಲ್ಲವ ಅವರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
