ಹೊನ್ನಾವರ:
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಸಮೀಪದ ಜಡಿಗದ್ದೆ ಪ್ರದೇಶದಲ್ಲಿ ಗೋವನ್ನು ಕೊಂದು ಮಾಂಸ ತೆಗೆದುಕೊಂಡು ಹೋದ ದುರುಳರ ಕೃತ್ಯ ಬೆಳಕಿಗೆ ಬಂದಿದೆ.
ವಂದೂರಿನ ಜಡಿಗದ್ದೆಯ ಗೇರು ಪ್ಲಾಂಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗಣಪತಿ ಮಹಾಬಲೇಶ್ವರ ಭಟ್ ಅವರಿಗೆ ಸೇರಿದ್ದ ದನವನ್ನು ದುಷ್ಕರ್ಮಿಗಳು ಕೊಂದು ಮಾಂಸವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಹೊನ್ನಾವರ ಸಿಪಿಐ ಸಿದ್ದರಾಮೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರಲ್ಲಿ ಈ ಘಟನೆ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
