ಮುರ್ಡೇಶ್ವರ:
ಇಲ್ಲಿನ ರೈಲು ಹಳಿಯಲ್ಲಿ ಸಂಭವಿಸಿದ ದಾರುಣ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ 5.50ರಿಂದ 6 ಗಂಟೆಯ ನಡುವಿನ ಅವಧಿಯಲ್ಲಿ ಭಟ್ಕಳ ಕಡೆಯಿಂದ ಮುರ್ಡೇಶ್ವರದತ್ತ ಸಂಚರಿಸುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12620) ರೈಲಿಗೆ ದೇವಿಕಾನ ಬಸ್ತಿ ಸಮೀಪದ ಹಳಿಯಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಅಡ್ಡ ಬಂದಿದ್ದು, ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತನನ್ನು ಸುಮಾರು 55ರಿಂದ 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತನು ಕೆಂಪು ಬಣ್ಣದ ಟಿ-ಶರ್ಟ್, ನೀಲಿ ಚಕ್ಸ್ ಲುಂಗಿ ಹಾಗೂ ಕಪ್ಪು ಬಣ್ಣದ ನಿಕ್ಕರ್ ಧರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ರೈಲ್ವೆ ಮಾಸ್ಟರ್ ಕುಂದನ್ ದಳವಿ (27) ಅವರು ನೀಡಿದ ದೂರಿನ ಆಧಾರದಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 2023ರ ಕಲಂ 194 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಹಾಗೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
