ಸಿದ್ದಾಪುರ: ಸಿದ್ದಾಪುರ-ಸೊರಬ ಮುಖ್ಯ ರಸ್ತೆಯ ಸಿದ್ದಾಪುರ ತಾಲೂಕಿನ ಬಿಕ್ಕಳಸೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೊರಬ ಕಡೆಯಿಂದ ಸಿದ್ದಾಪುರಕ್ಕೆ ಬರುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಬೇಡ್ಕಣಿ ಶನೇಶ್ವರ ದೇವಾಲಯದ ಅರ್ಚಕರು ಎಂದು ಗುರುತಿಸಲಾಗಿದೆ. ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ.
