ದಾಂಡೇಲಿ :
ನಗರದ ರೋಟರಿ ಕ್ಲಬ್ ಆಶ್ರಯದಡಿ ಏ.19ರಂದು ನಗರದ ರೋಟರಿ ಶಾಲೆಯ ಸಭಾಭವನದಲ್ಲಿ ಅಂತರ ಜಿಲ್ಲಾ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ಬಿನ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಹೇಳಿದರು.
ನಗರದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಂದ್ಯಾವಳಿಯ ಕುರಿತಂತೆ ಮಾಹಿತಿಯನ್ನು ನೀಡಿದರು. ಈ ಪಂದ್ಯಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.
ಪಂದ್ಯಾವಳಿ ಆಯೋಜನೆಯ ಮುಖ್ಯಸ್ಥರಾದ ನವೀನ್ ಕಾಮತ್ ಅವರು ಮಾತನಾಡಿ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ದಾಳುಗಳು ಏಪ್ರಿಲ್ 17ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಏ.19ರಂದು ಬೆಳಿಗ್ಗೆ 9.00 ಗಂಟೆಯಿಂದ ಪಂದ್ಯಾವಳಿ ಆರಂಭವಾಗಲಿದೆ. 8 ವರ್ಷದೊಳಗಿನ, 10 ವರ್ಷದೊಳಗಿನ, 12 ವರ್ಷದೊಳಗಿನ, 14 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರಿಗೆ ಹಾಗೂ 16 ವರ್ಷದೊಳಗಿನ ಬಾಲಕ/ ಬಾಲಕಿಯರಿಗೆ ಮಿಕ್ಸೆಡ್ ಹೀಗೆ ಒಟ್ಟು ಐದು ವಿಭಾಗಗಳಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಇದರ ಹೊರತಾಗಿಯೂ ಮುಕ್ತ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಭಾಗವಹಿಸುವ ಸ್ಪರ್ಧಿಗಳು ರೂ. 300 ಪ್ರವೇಶ ಶುಲ್ಕವನ್ನು ಪಾವತಿಸಬೇಕು. ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸಬೇಕೆಂದು ವಿನಂತಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಹಾಗೂ ಪ್ರವೇಶಕ್ಕಾಗಿ 8762480128 / 9481360128 / 9591618850 ಮೊಬೈಲ್ ಸಂಖ್ಯೆಗೆ ಸಂಪರ್ಕಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಮಿಥುನ್ ನಾಯಕ, ರೋಟರಿ ಪ್ರಮುಖರಾದ ರಾಹುಲ್ ಬಾವಾಜಿ, ಅಭಿಷೇಕ ಕನ್ಯಾಡಿ ಉಪಸ್ಥಿತರಿದ್ದರು.
