ಶಿರಸಿ:
ತಾಲೂಕಿನ ಹನುಮಂತಿ ಸಮೀಪ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾರುಗಾರ ಗ್ರಾಮದಿಂದ ಹನುಮಂತಿ ಕಡೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ವಾಹನ ನಿಯಂತ್ರಣ ತಪ್ಪಿ ಬ್ರಿಜ್ ಕೆಳಗೆ ಉರುಳಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹಾರುಗಾರ ಗ್ರಾಮದ ವೆಂಕಟರಮಣ ಗಣಪ ಗೌಡಾ (35) ಎಂದು ಗುರುತಿಸಲಾಗಿದೆ. ವೆಂಕಟರಮಣ ಅವರು ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ವೆಂಕಟರಮಣ ಅವರು ಪ್ರಾಣ ಕಳೆದುಕೊಂಡಿದ್ದು, ಬೈಕ್ ಮೇಲಿದ್ದ ತಾಯಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
