ದಾಂಡೇಲಿ : ಮೇ.28ರಂದು ನಡೆಯಲಿರುವ ಬಕ್ರೀದ್ ಹಬ್ಬದ ನಿಮಿತ್ತವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಜನಸಾಮಾನ್ಯರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಮತ್ತು ಅಹಿತಕರ ಘಟನೆ ಸಂಭವಿಸದಂತೆ ಜನ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಪೊಲೀಸ್ ಇಲಾಖೆಯ ವತಿಯಿಂದ ದಾಂಡೇಲಿ ನಗರದಲ್ಲಿ ಮಂಗಳವಾರ ಸಂಜೆ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನಗರದ ಹಳಿಯಾಳ ರಸ್ತೆಯಿಂದ ಆರಂಭಗೊಂಡ ಪಥ ಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕೊನೆಯಲ್ಲಿ ನಗರದ ಸೋಮಾನಿ ವೃತ್ತದಲ್ಲಿ ಸಂಪನ್ನಗೊಂಡಿತು.
ಪಥ ಸಂಚಲನದಲ್ಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್ಐ ಗಳಾದ ಅಮೀನ್ ಅತ್ತಾರ್, ಕಿರಣ್ ಪಾಟೀಲ್, ಜಗದೀಶ ನಾಯ್ಕ ಮತ್ತು ಮಹಾಂತೇಶ ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಎಎಸ್ಐ ಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಕೆ.ಎಸ್.ಆರ್.ಪಿ ಸಿಬ್ಬಂದಿಗಳು ಭಾಗವಹಿಸಿದ್ದರು.
