ದಾಂಡೇಲಿ:
ನಗರದ ಪ್ರಮುಖ ರಸ್ತೆಯಲ್ಲಿ ನಡೆಯುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ನಿರಂತರ ಮಳೆಯ ನಡುವೆಯೂ ರಸ್ತೆ ಮೇಲೆ ಡಾಂಬರ ಹಾಸುವ ಕೆಲಸ ನಡೆಸಿರುವ ಗುತ್ತಿಗೆದಾರನ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಯ ನೀರು ರಸ್ತೆಯ ಮೇಲೆ ನಿಂತಿದ್ದರೂ ಕಾಮಗಾರಿ ಮುಂದುವರಿಸಲಾಗಿದ್ದು, ಇದರಿಂದ ರಸ್ತೆ ಗುಣಮಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆ ಕಿತ್ತು ಹೋಗುವ ಭೀತಿ ವ್ಯಕ್ತವಾಗಿದ್ದು, ಸರ್ಕಾರದ ಹಣ ವ್ಯರ್ಥವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಕಳಪೆ ಕಾಮಗಾರಿಯನ್ನು ಖಂಡಿಸಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮಳೆಗಾಲದಲ್ಲಿ ತಾಂತ್ರಿಕ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿದ್ದು, ಪರಿಶೀಲನೆಯ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕ ಆರ ವಿ ದೇಶಪಾಂಡೆ ಹಲವು ಬಾರಿ ನಗರಸಭೆಯ ಅಧಿಕಾರಿಗಳಿಗೆ ಕಳಪೆ ಕಾಮಗಾರಿ ನಡೆಸುವ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಖಡಕ ಆಗಿ ಸೂಚನೆ ನೀಡಿದ್ದರು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದೆಯಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.ನಗರದಲ್ಲಿ ಇಗಾಗಲೆ ಹಲವು ಕಡೆ ಕಳಪೆ ಡಾಂಬರಿಕರಣ ನಡೆದಿದ್ದು ಮುಂದೆಯು ಇದೆ ರೀತಿ ನಡೆಯುತ್ತದೆ ಎಂದು ಸಾರ್ವಜನಿಕರ ಮಾತಾಗಿದೆ.
