ದಾಂಡೇಲಿ :
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ ಅವರ ಜೀವನ ವ್ಯಕ್ತಿತ್ವ ಸದಾ ಸ್ಮರಣೀಯವಾಗಿದೆ. ಅಹಿಂಸಾತ್ಮಕ ಹೋರಾಟದ ಮೂಲಕ ಇಡೀ ರಾಷ್ಟ್ರದ ಜನರನ್ನು ಸಂಘಟಿಸಿದ ರೀತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸು ಮಾಡುವ ಮಹೋನ್ನತ ಜವಾಬ್ದಾರಿಯನ್ನು ನಾವು ನೀವೆಲ್ಲರೂ ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಕಾಗದ ಕಾರ್ಖಾನೆಯ ಹಿರಿಯ ಅಧಿಕಾರಿಯಾದ ಅಶೋಕ ಶರ್ಮಾ ಕರೆ ನೀಡಿದರು.
ಅವರು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಆಶ್ರಯದಲ್ಲಿ ಬಂಗೂರನಗರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ದಾಂಡೇಲಿಯಲ್ಲಿರುವ ಏಕೈಕ ಗಾಂಧಿ ಪ್ರತಿಭೆಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಶೈಲೆಶ ಪರಮಾನಂದ, ನಗರ ಸಭೆಯ ಪೌರಾಯುಕ್ತ ವಿವೇಕ ಬನ್ನೆ, ಡಿವೈಎಸಪಿ ಶಿವಾನಂದ ಮದರಖಂಡಿ,ಸಿಪಿಐ ಶಿವಾನಂದ ಅಂಬಿಗೆರ್,ಪಿಎಸೈ ಅಮೀನ ಅತ್ತಾರ, ಕಾಗದ ಕಾರ್ಖಾನೆಯ ಹಿರಿಯ ಅಧಿಕಾರಿ ಅನುಜ ತಾಯಲ,ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ವಿಜಯ ಮಹಾಂತೇಶ,ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ಮಾಜಿ ನಗರಸಭಾ ಸದಸ್ಯ ಮೋಹನ ಹಲವಾಯಿ, ಕೀರ್ತಿ ಗಾಂವ್ಕರ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಧಿಕಾರಿಗಳು, ಪತ್ರಕರ್ತರ ಸಂಘದ ಪದಾಧಿಕಾರಿಗಳು ಕಾಗದ ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೀರ್ತಿ ಗಾಂವಕರ ಅವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ವಂದಿಸಿದರು.
