ದಾಂಡೇಲಿ : ತಾಲೂಕಿನ ಕುಳಗಿ ರಸ್ತೆಯಲ್ಲಿ ಮೋಹಿನಿ ವ್ರತದ ಹತ್ತಿರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಭಾನುವಾರ ಪತ್ತೆಯಾಗಿದೆ.
ಕಳೆದ ಐದಾರು ದಿನಗಳ ಹಿಂದೆಯೇ ನೇಣು ಬಿಗಿದು ಮೃತಪಟ್ಟಿರುವ ಶಂಖೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು 30-35 ವರ್ಷ ವಯೋಮಿತಿಯವರು ಇರಬಹುದು ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಿ. ಗಿರೀಶ್, ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್ಐ ಗಳಾದ ಅಮೀನ್ ಅತ್ತಾರ್ ಶಿವಾನಂದ ನಾವದಗಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
