ದಾಂಡೇಲಿ: ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಿನು ಊಟ ಹೋಟೆಲ್ನಲ್ಲಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಊಟದ ಹೋಟೆಲ್ವೇ ಅಥವಾ ಬಾರ್ ಆ್ಯಂಡ್ ರೆಸ್ಟೋರೆಂಟ್ವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಹೋಟೆಲ್ನಲ್ಲಿ ಮದ್ಯ ಮಾರಾಟಕ್ಕೆ ಅಗತ್ಯ ಪರವಾನಗಿ ಇದೆಯೇ ಎಂಬುದನ್ನು ಅಬಕಾರಿ ಇಲಾಖೆ ಪರಿಶೀಲಿಸಬೇಕಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
