ಕಾರವಾರ :
ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಎನ್ಎಸ್ ವಾಗ್ಶೀರ್ ಸಬ್ಮೆರಿನ್ನಲ್ಲಿ ಪ್ರಯಾಣಿಸಿದರು.
ನೌಕಾನೆಗೆ ಬಂದ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹಲೋಟ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ರಾಷ್ಟ್ರಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಆಯುಕ್ತೆ ಜಯಂತಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್, ಎಸ್ಪಿ ದೀಪನ್ ಎಂ.ಎನ್. ಉಪಸ್ಥಿತರಿದ್ದರು. ಜೊತೆಗೆ ಕಾರವಾರ ನೌಕಾನೆಲೆಯ ಫೀಲ್ಡ್ ಆಫೀಸರ್ ಕಮಾಂಡೆಂಟ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ನೌಕಾಪಡೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಬ್ಮೆರಿನ್ನಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟ್ರಪತಿ ಎಂಬ ದಾಖಲೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಟಿ (Chief of the Naval Staff) ಹಾಗೂ ಕರ್ನಾಟಕ ನೌಕಾ ಪ್ರದೇಶದ ಫ್ಲಾಗ್ ಆಫೀಸರ್ ಕಮಾಂಡಿಂಗ್ ಆಗಿರುವ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಉಪಸ್ಥಿತರಿದ್ದರು.
