ದಾಂಡೇಲಿ :
ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದು ಹೋಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಪಿಎಸ್ಐ ಕಿರಣ್ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆಗಿಳಿದ ಪೊಲೀಸರು ಕಳೆದು ಹೋಗಿದ್ದ ಮೊಬೈಲನ್ನು ಪತ್ತೆ ಹಚ್ಚಿದ್ದಾರೆ.
ಪತ್ತೆ ಹಚ್ಚಲಾದ ಮೊಬೈಲನ್ನು ಅದರ ವಾರಿಸುದಾರ ನಗರದ ಕಾಮತ್ ರಿಪ್ರೆಶ್ನೆಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಈರಣ್ಣ ಉಪ್ಪಿನಬೆಟಗೇರಿ ಅವರಿಗೆ ಬುಧವಾರ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಿರಣ್ ಪಾಟೀಲ್ ಅವರು ಹಸ್ತಾಂತರಿಸಿದರು.
