ಮುಂಡಗೋಡ:
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
33 ವರ್ಷ ವಯಸ್ಸಿನ ಅವ್ರು ಈಗ್ಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಬಳಿಕ ಅವ್ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಅಸು ನೀಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆ ಹಾಗೂ ಮುಂಡಗೋಡದಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.
ಹಳಿಯಾಳ, ಯಲ್ಲಾಪೂರ, ದಾಂಡೇಲಿ ಮತ್ತು ಪ್ರಸ್ತುತ ಮುಂಡಗೋಡ ಪೋಲಿಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಜನಪರ ಕಾಳಜಿಯುಳ್ಳ ವ್ಯಕ್ತಿಯಾಗಿದ್ದರು.
ಠಾಣೆಗೆ ಬರುವ ಪ್ರತಿಯೊಬ್ಬರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದ ಅವರು ದುಷ್ಟ ಶಕ್ತಿಗಳಿಗೆ ಸಿಂಹ ಸ್ವಪ್ನವಾಗಿದ್ದರು. ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದ ಅವರು ಪತ್ನಿ, ಮಗ ಮತ್ತು ತಂದೆ,ತಾಯಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
