
ಕಾರವಾರ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ.ಟಿ ಜಯಕುಮಾರ ಅವರಿಗೆ ಅದ್ದೂರಿಯಾಗಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬೀಳ್ಕೋಡುಗೆ ಸಮಾರಂಭದಲ್ಲಿ ಸಿ.ಟಿ ಜಯಕುಮಾರ ಅವರನ್ನು ಸನ್ಮಾನಿಸಲಾಯಿತು. ಕೆಲವು ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ನಡೆದ ಸಂದಿಗ್ಧ ಪರಿಸ್ಥಿತಿಗಳನ್ನು ಉತ್ತಮವಾಗಿ ನಿಭಾಯೊಸೊದ ಅವರ ಕಾರ್ಯದ ಬಗ್ಗೆ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಜಿಲ್ಲಾ ಪೊಲೀಸ್ ಕಚೇರಿಯ ಲಿಫಿಕ ಸಿಬ್ಬಂದಿಗಳು ಹಾಜರಿದ್ದರು.