ದಾಂಡೇಲಿ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ನಿಮಿತ್ತವಾಗಿ ದಾಂಡೇಲಿಯ ಲಯನ್ಸ್ ಕ್ಲಬ್ ಹಾಗೂ ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಆಶ್ರಯದಡಿ ಇದೇ ಬರುವ ಮಾರ್ಚ್.08ರಂದು ದಾಂಡೇಲಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾಂಡೇಲಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ.ಗೌರಿ ಶೇಖರ ಹಂಚಿನಾಳಮಠ ಮತ್ತು ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಇದರ ಉತ್ತರ ಕರ್ನಾಟಕ ಬೆಳಗಾವಿ ವಿಭಾಗದ ಅಧ್ಯಕ್ಷೆ ರೇಣುಕಾ ಬಂದಂ ಅವರು ತಿಳಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತಂತೆ ಮಾಹಿತಿಯನ್ನು ನೀಡಿದರು. ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ಬಿನ ಪ್ರಮುಖರಾದ ಡಾ.ಶೇಖರ ಹಂಚಿನಾಳಮಠ, ಶಶಿಕಲಾ ಶೆಟ್ಟಿ, ರಾಷ್ಟ್ರೀಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಇದರ ದಾಂಡೇಲಿ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಾನೆ ಹಾಗೂ ಸಂಘಟನೆಯ ಪ್ರಮುಖರಾದ ಜಯ ನಾಯ್ಕ ಉಪಸ್ಥಿತರಿದ್ದರು.
