
ದಾಂಡೇಲಿ:
ಉತ್ತರ ಕನ್ನಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ನೀವು ಶೀರ್ಷಿಕೆ ಅಡಿಯಲ್ಲಿ ಶನಿವಾರ ದಾಂಡೇಲಿ ನಗರದ ಹಾರ್ನ್ ಬಿಲ್ ಸಭಾ ಭವನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ದಾಂಡೇಲಿ ತಾಲೂಕಿನ ತಹಶೀಲ್ದಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಬಸವರಾಜ ಎಸ್. ಹೊರಟ್ಟಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಮಾವೇಶದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷರಾದ ಯಮುನಾ ಗಾಂವ್ಕರ್ (94487 29360) ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.